ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ಸಾವಿತ್ರಿ ಪಾಯಿಪುಲೆ ಮಹಿಳಾ ಘಟಕದ ನಗರದ ಸ್ಲಂ ಭವನದಲ್ಲಿ ಪತ್ರಿಕಾ ಹೇಳಿಕೆ ಸಭೆ ಹಮ್ಮಿಕೊಳ್ಳಲಾಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಳನದ ರಾಜ್ಯ ಸಂಚಾಲಕರ ಎ.ನರಸಿಂಹಮೂರ್ತಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿAದ ಇದೇ ಫೆಬ್ರವರಿ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗೀ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ 2025-26ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು. 2023ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನೀಡಿರುವ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಿ ಹಾಗೂ ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆ ಘೋಷಣೆ ಸೇರಿದಂತೆ ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಹಕ್ಕೋತ್ತಾಯಗಳ ಈಡೇರಿಕೆಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 5 ಸಾವಿರ ಕಾರ್ಯಕರ್ತರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶಗೊಂಡು ಈ ಕೆಳಕಂಡ ಹಕ್ಕೋತ್ತಾಯಗಳನ್ನು ವಸತಿ ಸಚಿವರ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ ಎಂದರು. ಸಂದರ್ಭದಲ್ಲಿ ತುಮಕೂರು ಸ್ಲಂ ಸಮಿತಿ ಪದಾಧಿಕಾರಿಗಳಾದ ಶಂಕ್ರಯ್ಯ, ತಿರುಮಲಯ್ಯ, ಕೃಷ್ಣಮೂರ್ತಿ ಮುಬಾರಕ್, ಪಾಲ್ಗೊಂಡಿದ್ದರು.
(Visited 1 times, 1 visits today)