ತುಮಕೂರು: ಇತ್ತೀಚೆಗೆ ಹೆಚ್ಚುತ್ತಿರುವ ಸೈಬರ್ ಹಾವಳಿಗೆ ಕಡಿವಾಣ ಹಾಕಲು ಸರ್ಕಾರ ಮಟ್ಟದಲ್ಲಿ ಅನೇಕ ಚರ್ಚೆ, ಬೆಳವಣಿಗೆಗಳು ನಡೆಯುತ್ತಿದ್ದು ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 25,000 ಸೈಬರ್ ಪ್ರಕರಣಗಳು ದಾಖಲಾಗುತ್ತಿವೆ. ಇದರಲ್ಲಿ ಶೇ.20 ರಷ್ಟು ಪ್ರಕರಣ ಪತ್ತೆ ಹಚ್ಚಲು ಸಾಧ್ಯವಾಗುತ್ತಿದೆ ಎಂದು ಗೃಹ ಸಚಿವರು ಹಾಗೂ ಸಾಹೇ ವಿವಿ ಕುಲಾಧಿಪತಿಗಳು ಆದ ಸವ್ಯಸಾಚಿ ಡಾ. ಜಿ ಪರಮೇಶ್ವರ್ ಅವರು ಹೇಳಿದರು.
ನಗರದ ಕುಣಿಗಲ್‌ರಸ್ತೆಯ ಎಸ್‌ಎಸ್‌ಐಟಿ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ಆರಂಭಿಸಲಾದ ಪರಂ ಶುದ್ಧ ಕುಡಿಯುವ ನೀರಿನ ಘಟಕವನ್ನು ಭಾನುವಾರ)ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈ ಹಿಂದೆ ಗೃಹ ಸಚಿವನಾಗಿದ್ದ ಕಾಲಘಟ್ಟದಲ್ಲಿ ಇದರ ಸ್ಥಾಪನೆಗೆ ಸರ್ಕಾರ ಮಟ್ಟದಲ್ಲಿಚಿಂತನೆ ನಡೆಸಲಾಗಿತ್ತು. ಈಗ ಪೊಲೀಸ್ ಇಲಾಖೆ ಸೇರಿದಂತೆ ಸಿದ್ಧಾರ್ಥ ಇಂಜಿನಿಯರಿAಗ್ ಕಾಲೇಜಿನ ಸಹಯೋಗದಲ್ಲಿ ಸೈಬರ್ ಸೆಕ್ಯೂರಿಟಿ ವಿಭಾಗದ ಜೊತೆಗೆ ಸೇರಿ ಸೆಂಟರ್ ಆಫ್‌ಎಕ್ಸಲೆನ್ಸ್ ಇನ್ ಸೈಬರ್ ಸೆಕ್ಯೂರಿಟಿ ಸೆಂಟರ್ ಸದ್ಯವೇ ಆರಂಭಿಸಲಾಗುವುದು ಎಂದರು. ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ: ಸ್ಥಳೀಯವಾಗಿ ಶುದ್ಧವಾದ ನೀರನ್ನು ಒದಗಿಸುವ ಸಲುವಾಗಿ ಹಾಗೂ ಸಿವಿಲ್ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಹಾಗೂ ಸಂಶೋಧನಾನ್ಮಕ ಕೆಲಸಗಳಿಗೆ ಪೂರಕವಾಗದ ಪರಂ ಕುಡಿವ ನೀರಿನ ಘಟಕ ಲೋಕಾರ್ಪಣೆಗೊಂಡಿದ್ದು, ಅತ್ಯಾಧುನಿಕ ತಂತ್ರಜ್ಞಾನದಿAದ ಮಿನಿರಲ್ ಒಳಗೊಂಡAತಹ ಪರಂ ಶುದ್ಧ ಕುಡಿಯುವ ನೀರಿನ ಕೇಂದ್ರವನ್ನು ವ್ಯಾಪಾರದ ಉದ್ದೇಶದಿಂದ ಸ್ಥಾಪಿಸಲಾಗಿಲ್ಲ. ಸ್ಥಳೀಯವಾಗಿ ಉತ್ತಮವಾದ ಶುದ್ಧಕುಡಿಯುವ ನೀರನ್ನು ಒದಗಿಸುವ ಸಲುವಾಗಿ ಸ್ಥಾಪನೆ ಮಾಡಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಡಾ.ಜಿ ಪರಮೇಶ್ವರ್ ಅವರು ತಿಳಿಸಿದರು. ಇದೇ ವೇಳೆ ಶ್ರೀ ಸಿದ್ಧಾರ್ಥ ಇಂಜಿನಿಯರಿAಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿಭಾಗಗಳ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಹವಾ ನಿಯಂತ್ರಿತ ನೂತನ ಅತ್ಯಾಧುನಿಕ ಸುಸಜ್ಜಿತÀ ಸಭಾಂಗಣಕ್ಕೆ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸದಸ್ಯರಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ, ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ, ರಿಜಿಸ್ಟಾರ್‌ಅಶೋಕ್ ಮೆಹ್ತಾ, ಸಾಹೇ ವಿವಿ ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ ವೀರಯ್ಯ, ಎಸ್‌ಎಸ್‌ಐಟಿ ಪ್ರಾಂಶುಪಾಲರಾದ ಡಾ. ಎಂ.ಎಸ್. ರವಿಪ್ರಕಾಶ್, ಎಸ್ಟೇಟ್ ಮ್ಯಾನೇಜರ್ ಡಾ.ಜಿ.ಡಿ.ಶಿವರಾಜು, ಮೆಡಿಕಲ್ ಕಾಲೇಜಿನ ಸಾನಿಕೊಪ್ಪ, ಉಪಪ್ರಾಂಶುಪಾಲರಾದ ಡಾ ಪ್ರಭಾಕರ್, ಎಸ್‌ಎಸ್‌ಎಸ್‌ಇ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಲ್ ಸಂಜೀವ್ ಕುಮಾರ್, ಜಿಪಂ ಸಿಇಒ ಸ್ಥರು ಹಾಜರಿದ್ದರು.

(Visited 1 times, 1 visits today)