ತುಮಕೂರು: ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ತಮ್ಮ ಜೀವನದ ಗುರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಕಲಿತು ಮುನ್ನಡೆಯಿರಿ ಎಂದು ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾನಿಲಯದಲ್ಲಿ ಎಲೆಕ್ಟಿçಕಲ್ ಆಂಡ್ ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್ ಹಾಗೂ ಜಿಟಿಟಿ ಫೌಂಡೇಷನ್ ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ “ಎಲೆಕ್ಟಿçಕ್ ವೆಹಿಕಲ್ ಟೆಕ್ನಾಲಜಿ” ಎಂಬ ವಿಷಯದ ಕುರಿತು ಇಂದಿನಿAದ ಆರಂಭಗೊAಡ 30ದಿನಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮ ಜಗತ್ತಿಗೆ ಅಗತ್ಯವಿರುವ ತಂತ್ರಜ್ಞಾನವನ್ನು ಅರಿತುಕೊಂಡು ಮುನ್ನಡೆಯಬೇಕು ಆಗ ಮಾತ್ರ ನೀವು ಯಶಸ್ವಿಯಾಗುತ್ತೇವೆ. ಹಾಗಾಗಿ ವಿದ್ಯಾರ್ಥಿಗಳು ಪ್ರತಿನಿತ್ಯ ಕಲಿಯಬೇಕು.ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುಬೇಕು ಹಾಗೂ ಕೈಗಾರಿಕೆಗಳಿಗೆ ಬೇಕಾದ ಕೌಶಲವನ್ನು ಕಲಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಲೆಕ್ಟಿçಕ್ ಅಂಡ್ ಎಲೆಕ್ಟಾçನಿಕ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ರಾಜೇಶ್ ಕಾಮತ್ ಮಾತನಾಡಿ, ಕಾಲೇಜಿನಲ್ಲಿ ನಡೆಯುವ ತರಬೇತಿ ಕಾರ್ಯಗಾರಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಭಾಗವಹಿಸಿ ಉತ್ತಮ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು. ನಿಮ್ಮಲ್ಲಿ ಏನೇ ಗೊಂದಲಗಳಿದ್ದರೂ ಸಂವಾದದ ಮೂಲಕ ಅಧ್ಯಾಪಕರೊಂದಿಗೆ ಚರ್ಚಿಸಿ ತಮ್ಮ ಗೊಂದಲವನ್ನು ಬಗೆಹರಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಟಿಟಿ ಫೌಂಡೇಷನ್‌ನ ಮ್ಯಾನೇಜರ್ ಪವನ್‌ಕುಮಾರ್, ಎಲೆಕ್ಟಿçಕಲ್ ಆಂಡ್ ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥರಾದ ಪ್ರದೀಪ್, ಕಾರ್ಯಕ್ರಮದ ಸಂಯೋಜಕರಾದ, ಡಾ. ಯೋಗಾನಂದ್ ಬಿ.ಎಸ್, ಪ್ರಾಧ್ಯಾಪಕರಾದ ಡಾ.ಜಿ.ಎಸ್ ಶೇಷಾದ್ರಿ, ಸಹಾಯಕ ಪ್ರಧ್ಯಾಪಕರಾದ, ಲಿಖಿತ್ ಯು.ಎನ್, ಪ್ರಿಯಾಂಕ ಎಂ.ಎನ್, ಸೌಮ್ಯ ಕೆ.ಆರ್, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಹಾಜರಿದ್ದರು. ತರಬೇತಿ ಕಾರ್ಯಗಾರ 30ದಿನಗಳ ಕಾಲ ನಡೆಯಲಿದ್ದು 70 ಮಂದಿ ವಿದ್ಯಾರ್ಥಿಗಳು ಭಾಗವಹಿಸಿ ತರಬೇತಿಯನ್ನು ಪಡೆಯುತ್ತಿದ್ದಾರೆ.
(Visited 1 times, 1 visits today)