ತುಮಕೂರು: ಒಳಮೀಸಲಾತಿ ಜಾರಿಯಾಗುವವರೆಗೂ ಬ್ಯಾಕಲಾಗ್ ಸೇರಿದಂತೆ ಯಾವುದೇ ಸರಕಾರಿ ಹುದ್ದೆಗಳನ್ನು ತುಂಬ ಬಾರದು, ತುಮಕೂರು ಜಿಲ್ಲೆಯ ಮಾದಿಗ ಸಮುದಾಯದ ಮುಖಂಡರಿಗೆ ವಿಧಾನ ಪರಿಷತ್ ಹಾಗೂ ವಿವಿಧ ನಿಗಮ ಮಂಡಳಿಗಳ ಪದಾಧಿಕಾರಿಗಳ ಹುದ್ದೆ ನೀಡಬೇಕೆಂದು ಆಗ್ರಹಿಸಿ ಇಂದು ಮಾದಿಗ ಸಂಘಟನೆಗಳ ಒಕ್ಕೂಟದವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ಸಂಬAದಿಸಿದAತೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಅಗತ್ಯ ದಾಖಲೆಗಳನ್ನು ಕಲೆ ಹಾಕಿದ್ದು, ಶೀಘ್ರದಲ್ಲಿಯೆ ವರದಿ ನೀಡುವ ಸಾಧ್ಯತೆ ಇದೆ. ಇಂತಹ ಸಮಯ ವಿಳಂಭ ಕಾರಣ ನೀಡಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಅನುಮತಿ ಕೋರಿರುವುದು ದುರದೃಷ್ಟಕರ. ಹಾಗಾಗಿ ಸರಕಾರ ಯಾವ ಕಾರಣಕ್ಕೂ ಒಳಮೀಸಲಾತಿ ಜಾರಿಯಗುವವರೆಗೂ ಸರಕಾರಿ ಹುದ್ದೆಗಳನ್ನು ತುಂಬಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸಲ್ಲಿಸಿದ ನಂತರ ಮಾತನಾಡಿದ ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಕೋಡಿಯಾಲ ಮಹದೇವ್,ಸುಮಾರು 3 ದಶಕಗಳ ಹೋರಾಟದ ಫಲವಾಗಿ ಸುಪ್ರಿಂಕೋರ್ಟು ಒಳಮೀಸಲಾತಿ ಜಾರಿಯ ಅಧಿಕಾರವನ್ನು ರಾಜ್ಯ ಸರಕಾರಕ್ಕೆ ನೀಡಿದೆ. ಇಂತಹ ವೇಳೆಯಲ್ಲಿ ಎಂಪೆರಿಕಲ್ ಡಾಟಾ ಪಡೆಯಲು ಸರಕಾರ ನ್ಯಾ.ನಾಗಮೋಹನ್ ದಾಸ್ ಸಮಿತಿ ರಚಿಸಿ ವರದಿ ನೀಡಲು ಸೂಚನೆ ನೀಡಿದೆ.ಸರಕಾರದ ಮೇಲೆ ಭರವಸೆ ಇಟ್ಟುಕೊಂಡು ಮಾದಿಗ ಸಮುದಾಯ ಜಾತಕ ಪಕ್ಷಿಯಂತೆ ಕಾಯುತ್ತಿರುವ ವೇಳೆಯಲ್ಲಿ ಕೆಲ ಇಲಾಖೆಗಳ ಖಾಲಿ ಇರುವ ಹುದ್ದೆ ತುಂಬಲು ಪ್ರಯತ್ನ ನಡೆಸಿರುವುದು ಖಂಡನೀಯ. ಇದರಿಂದ ಮಾದಿಗ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟಾಗುತ್ತದೆ. ಹಾಗಾಗಿ ಸರಕಾರ ಒಳಮೀಸಲಾತಿ ಜಾರಿಯ ವರೆಗೂ ಯಾವುದೇ ಒತ್ತಡಕ್ಕೆ ಮಣಿಯದೆ ಸರಕಾರವೇ ನೀಡಿರುವ ಸುತ್ತೊಲೆಗೆ ಬದ್ದವಾಗಿರಬೇಕು ಎಂದು ಒತ್ತಾಯಿಸಿದರು.
ಮಾದಿಗ ಮುಖಂಡರಾದ ಹೆತ್ತೇನಹಳ್ಳಿ ಮಂಜುನಾಥ್ ಮಾತನಾಡಿ,ತುಮಕೂರು ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಜನ ಸಮುದಾಯವನ್ನು ಹೊಂದಿರುವ ಜಾತಿ ಮಾದಿಗ ಸಮುದಾಯ. ಪರಿಶಿಷ್ಟ ಜಾತಿಯಲ್ಲಿ ಅತ್ಯಂತ ಹಿಂದುಳಿದಿದ್ದು ಅತಿ ಹೆಚ್ಚು ಅಸ್ಪೃಶ್ಯತೆಯನ್ನು ಇಂದಿಗೂ ಅನುಭವಿಸುತ್ತಿದೆ.ಇದು ಕೇವಲ ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅಷ್ಟೇ ಅಲ್ಲದೆ ರಾಜಕೀಯ ಕ್ಷೇತ್ರದಲ್ಲಿಯೂ ಹಿಂದುಳಿದಿದೆ. ಈ ವೇಳೆ ಮಾದಿಗ ಸಂಘಟನೆಗಳ ಒಕ್ಕೂಟದ ಡಿ.ಜಿ.ಸಾಗರ್,ಸೋರೆಕುಂಟೆ ಯೋಗೀಶ್, ಎಸ್.ಪಿ.ರಾಜಣ್ಣ, ಕೆಸ್ತೂರ್ ಮೂರ್ತಿ, ಪರಮೇಶ್, ರಾಜು ಕೋರ, ಅಂಗಲಕುAಟೆ ರಂಗಸ್ವಾಮಿ,ಪಿ.ಎನ್.ರಾಮಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

(Visited 1 times, 1 visits today)