ತುಮಕೂರು: ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣಗಳು ವರದಿಯಾಗಿಲ್ಲ. ಚಿಕ್ಕಬಳ್ಳಾಪುರದಲ್ಲಿ ಮಾತ್ರ ಒಂದು ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗೆ ಸಂಪರ್ಕ ಹೊಂದಿರುವ ಮಧುಗಿರಿ ತಾಲ್ಲೂಕು ಬಳಿ ಮುನ್ನೆಚ್ಚರಿಕೆ ಕ್ರಮವಾಗಿ ಚೆಕ್ ಪೋಸ್ಟ್ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು. ನಗರದ ಪಾಲಿಕೆ ಆವರಣದಲ್ಲಿ ನೀರು ಸರಬರಾಜು ನೌಕರರು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಗುತ್ತಿಗೆ ನೌಕರರ ಸಮಸ್ಯೆ ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಯಾವುದೇ ಕೋಳಿ ಫಾರಂಗಳ ಪ್ರದೇಶಗಳಲ್ಲೂ ಹಕ್ಕಿಜ್ವರ ಪ್ರಕರಣ ಕಂಡು ಬಂದಿಲ್ಲ ಎಂದರು. ನಮ್ಮ ದೇಶದ ಆಹಾರ ಮಾಡುವ ವಿಧಾನವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಮಾಂಸವನ್ನು ಸುಮಾರು ೭೦ ಡಿಗ್ರಿಯಷ್ಟು ಬೇಯಿಸಿ ನಂತರ ತಿನ್ನಬೇಕು. ಯಾವುದೇ ಕಾರಣಕ್ಕೂ ಹಸಿ ಮಾಂಸವನ್ನು ಬಳಸಬಾರದು ಎಂದು ಅವರು ಹೇಳಿದರು.
(Visited 1 times, 1 visits today)