ತುಮಕೂರು: ಮತದಾರರ ಪಟ್ಟಿ ತಯಾರಿಕೆ ಸಂದರ್ಭದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಉಪ ವಿಭಾ ಗಾಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ಉಪವಿಭಾಗ ಮಟ್ಟದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ತಯಾರಿಕೆ ಸಂಬAಧ ಮತದಾರರ ನೋಂದಣಾಧಿಕಾರಿಗಳ ಕರಡು ಕೈಪಿಡಿ ಕುರಿತು ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಅಭಿಪ್ರಾಯಗಳನ್ನು ಪಡೆ ಯುವ ಸಂಬAಧ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ಉಪವಿಭಾಗ ವ್ಯಾಪ್ತಿಗೊಳಪಡುವ ಪ್ರತಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತದಾರರ ಪಟ್ಟಿಯಿಂದ ಅನರ್ಹರ ಹೆಸರನ್ನು ಕೈಬಿಡಬೇಕು. ಮತದಾರರು ಎರಡು ಕಡೆ ಹೆಸರನ್ನು ನೋಂದಾಯಿಸಿಕೊAಡಿದ್ದರೆ ಒಂದು ಕಡೆ ಅವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಮತದಾರರು ಮೃತರಾಗಿದ್ದರೆ, ವರ್ಗಾವಣೆಯಾಗಿದ್ದರೆ ಅಂತಹವರ ಹೆಸರನ್ನು ಕೈಬಿಟ್ಟು ನಿಖರವಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕೆಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ನೋಂದಾಯಿತ ಹಾಗೂ ಮಾನ್ಯತೆ ಪಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಲಹೆಗಳನ್ನು ನೀಡಿದರು. ತಹಶೀಲ್ದಾರ್ ರಾಜೇಶ್ವರಿ, ಶಿರಸ್ತೆದಾರ್ ಆರ್.ಜಿ ನಾಗಭೂಷಣ್ ಹಾಗೂ ಗುರುಪ್ರಸಾದ್, ಹಾಜರಿದ್ದರು.

(Visited 1 times, 1 visits today)