ತುಮಕೂರು: ಕುಣಿಗಲ್ ತಾಲ್ಲೂಕು ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಕಳೆದ ಮೂರು ತಿಂಗಳಿAದ ನೀರಿಗೆ ಸಮಸ್ಯೆಯುಂಟಾಗಿದ್ದು, ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್ ಯು. ರಶ್ಮಿ ಅವರಿಗೆ ಸೂಚನೆ ನೀಡಿದರು.
ಕುಣಿಗಲ್ ಶಾಸಕ ಡಾ. ರಂಗನಾಥ ಅವರ ಸೂಚನೆ ಮೇರೆಗೆ ಶುಕ್ರವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರಿಂದ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದ ಅವರು, ಪಕ್ಕದ ಗ್ರಾಮದ ಕೊಳವೆ ಬಾವಿಯಿಂದ ಪೈಪ್‌ಲೈನ್ ಮೂಲಕ ನೀರೊದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಸ್ಯೆ ತಿಳಿದ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಂಡ ಜಿಲ್ಲಾಧಿಕಾರಿಗಳ ಕ್ರಮಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಕುಣಿಗಲ್ ಪಟ್ಟಣದ ಎಪಿಎಂಸಿ ಪ್ರಾಂಗ ಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ತೂಕ ಮತ್ತು ಅಳತೆ ಪ್ರಕ್ರಿಯೆಯನ್ನು ಪರಿಶೀಲಿಸಿ ರೈತರಿಂದ ಅಹವಾಲುಗಳನ್ನು ಆಲಿಸಿ ದರು.
ನಂತರ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಪರಿಹಾರ ಕ್ರಮಕೈಗೊಳ್ಳಲು ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಈಗಾಗಲೇ ಪಕ್ಕದ ಗ್ರಾಮದಿಂದ ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮಕ್ಕೆ ನೀರೊದಗಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮದಲ್ಲಿ ತಲೆದೋರಿರುವ ನೀರಿನ ಸಮ ಸ್ಯೆಯನ್ನು ಕೂಡಲೇ ಬಗೆಹರಿಸಲು ಈಗಾಗಲೇ ಸ್ಥಳೀಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈಮಲ್ಯ ವಿಭಾಗದ ಇಂಜಿನಿಯರ್ ಹಾಗೂ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಗ್ರಾಮದ ಲ್ಲಿರುವ ೪೦ ಮನೆಗಳಿಗೂ ಕುಡಿಯುವ ನೀರಿಗೆ ತೊಂದರೆಯಾಗದAತೆ ವ್ಯವಸ್ಥೆ ಮಾಡಲಾಗಿದೆ. ಗ್ರಾಮ ಮಟ್ಟದ ಅಧಿಕಾರಿಗಳು ಸ್ಥಳೀಯವಾಗಿ ತಲೆದೋರುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಬೇಕು. ಇದರಿಂದ ತಹಶೀಲ್ದಾರರು, ಜಿಲ್ಲಾಡಳಿತಕ್ಕೆ ಬರುವ ದೂರುಗಳನ್ನು ತಪ್ಪಿಸಬಹುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈವರೆಗೂ ೧೨ ಗ್ರಾಮಗಳಲ್ಲಿ ಕುಡಿ ಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿ ಸಲಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ೧೦೦೦ ಮಿ.ಮೀ. ಮಳೆಯಾಗಿರುವುದರಿಂದ ಜಿಲ್ಲೆಯನ್ನು ಬರಪೀಡಿತವೆಂದು ಸರ್ಕಾರದಿಂದ ಘೋಷಣೆ ಮಾಡಿಲ್ಲ. ಕಳೆದ ವರ್ಷ ಸರಾಸರಿಗಿಂತ ಶೇ.೬೫ಕ್ಕಿಂತ ಹೆಚ್ಚಿನ ಮಳೆಯಾಗಿರುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗಿದೆ. ಪಾವಗಡದಂತಹ ಗುಡ್ಡಗಾ ಡು ಪ್ರದೇಶಗಳಲ್ಲಿ ಕೊಳವೆ ಬಾವಿಗಳು ಕೆಟ್ಟು ಹೋಗುತ್ತಿರುವ ಹಾಗೂ ಕೊಳವೆ ಬಾವಿಗಳಲ್ಲಿ ನೀರಿನ ಇಳುವರಿ ಕಡಿಮೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ವರದಿಯಾದ ಕೂಡಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬದ್ಧವಾಗಿದೆ ಎಂದು ತಿಳಿಸಿದರಲ್ಲದೆ, ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಒದಗಿ ಸುವುದು ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ರಾಗಿ ಬೆಳೆದ ರೈತರ ಅನುಕೂಲಕ್ಕಾಗಿ ಕುಣಿಗಲ್ ತಾಲ್ಲೂಕಿನಲ್ಲಿ ೨ ರಾಗಿ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟಾರೆ ೧೧ ಕಡೆ ರಾಗಿ ಖರೀದಿ ಕೇಂದ್ರ ತೆರೆಯಲಾಗಿದ್ದು, ಸುಮಾರು ೫೬೦೦೦ ರೈತರು ರಾಗಿ ಮಾರಾಟ ಮಾಡಲು ಖರೀದಿ ಕೇಂದ್ರದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊAಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ೬ಲಕ್ಷ ಕ್ವಿಂಟಾಲ್ ರಾಗಿ ಖರೀದಿಯಾಗುತ್ತದೆ ಎಂಬ ನಿರೀಕ್ಷೆಯಿದ್ದು, ಜೂನ್ ಮಾಹೆವರೆಗೂ ರೈತರಿಂದ ರಾಗಿ ಖರೀದಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
ಜನರೇ ಸ್ವಯಂಪ್ರೇರಿತರಾಗಿ ಕೆರೆ ಒತ್ತುವರಿ ಮಾಡುವುದನ್ನು ನಿಲ್ಲಿಸಬೇಕು. ಈಗಾಗಲೇ ಒತ್ತುವರಿ ಮಾಡಿದ್ದರೆ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿನಿರ್ದೇಶಕ ಮಂಟೇಸ್ವಾಮಿ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
(Visited 1 times, 1 visits today)