ತುಮಕೂರು: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡ ಲಾಗಿದೆ. ಪ್ರತೀ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಮಾರ್ಚ್ ೧೬ ರಂದು ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹ ಗಾರರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಕವಿಗಳು ಹಾಗೂ ಸಾಹಿತಿಗಳಾದ ಶ್ರೀ ಹನುಮಂತೋಜಿರಾವ್ ರವರಿಗೆ ಕನ್ನಡ “ಸಾಹಿತ್ಯ ಸೇವಾ ರತ್ನ” ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು, ಜೊತೆಗೆ ಐದು ಕೃತಿಗಳ ಲೋಕಾರ್ಪಣೆಯನ್ನು ರಾಜ್ಯಧ್ಯಕ್ಷ ಮಧು ನಾಯ್ಕ ಲಂಬಾಣಿ ಮಾಡಿದರು. ಕಾರ್ಯ ಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಹಿರಿ ಯ ಸಾಹಿತಿ ಡಾಕ್ಟರ್ ಹಸೀನರವರು ಕವಿತೆ ವಾಚಿಸುವ ಮುಖೇನ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ರಾಮು ಎನ್ ರಾಥೋಡ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ಗೌರವ ಅಧ್ಯಕ್ಷರಾದ ಸಾಹಿತಿ ಗೊರೂರು ಅನಂ ತರಾಜು ಬಾಗವಹಿಸಿದ್ದರು.
(Visited 1 times, 1 visits today)