ತುಮಕೂರು: ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇದೇ ಮಾರ್ಚ್ ೨೧ ರಿಂದ ಏಪ್ರಿಲ್ ೪ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವ ಲೋಪದೋಷವಿಲ್ಲದೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ ೩೫,೬೩೬ ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದು, ಈ ಪೈಕಿ ತುಮ ಕೂರು(ದ) ಶೈಕ್ಷಣಿಕ ಜಿಲ್ಲೆಯಿಂದ ೧೨,೨೨೭ ವಿದ್ಯಾರ್ಥಿಗಳು, ೧೦,೨೪೬ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ೨೨,೪೭೩ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ೬,೮೯೭ ವಿದ್ಯಾರ್ಥಿಗಳು, ೬,೨೬೬ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ೧೩,೧೬೩ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾ ಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ತುಮಕೂರು(ದ) ೮೦ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ೪೯ ಸೇರಿ ಒಟ್ಟು ೧೨೯ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವ ಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಮಾರ್ಗಗಳನ್ನು ರಚಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಕ್ರಮವಹಿಸಲಾಗಿದೆ.ಜಿಲ್ಲಾ ಹಂತದಲ್ಲಿ ಪರೀಕ್ಷಾ ಕೇಂದ್ರಗಳ ಸಿಸಿಟಿವಿ ವೀಕ್ಷಣೆ(ವೆಬ್ ಕಾಸ್ಟಿಂಗ್) ಮಾಡಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಡೆಸ್ಕ್, ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ವ್ಯವಸ್ಥೆ ಹಾಗೂ ವಿದ್ಯುತ್ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀಟರ್ ವ್ಯಾಪ್ತಿಯ ಭಾರತೀಯ ನಾಗರಿಕ ಸುರಕ್ಷ ಸಂಹಿತೆ ೨೦೨೩ರ ಕಲಂ ೧೬೩ರನ್ವಯ ನಿಷೇಧಾಜ್ಞೆಯನ್ನು ಜಾರಿಗೊ ಳಿಸಲಾಗುವುದು. ಪರೀಕ್ಷಾ ಸಮಯದಲ್ಲಿ e಼ೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಲು ಆದೇಶ ಮಾಡಲಾಗುವುದು.
(Visited 1 times, 1 visits today)