ತುಮಕೂರು: ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳಲ್ಲಿ ೨೬೨೭ ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್‌ಎ)ಗಳನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ತಯಾರಿಕೆ, ಬಿಎಲ್‌ಓಗಳ ನೇಮಕಾತಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ನೋಂದಾಯಿತ/ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯನ್ನು ಸದೃಢಪಡಿಸುವ ಹಾಗೂ ಯಾವುದೇ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವ ಸಂಬAಧ ಈ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಚುನಾವಣೆಗಳಿಗೆ ಸಂಬAಧಿಸಿದAತೆ ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್ ಸೈಟ್, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‌ಸೈಟ್ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿ ಕಾಲಕಾಲಕ್ಕೆ ಪ್ರಕಟಿಸಲಾಗುತ್ತಿದ್ದು, ರಾಜಕೀಯ ಪಕ್ಷಗಳು ಸದರಿ ವೆಬ್‌ಸೈಟ್‌ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿಯಂತೆ ಒಟ್ಟು ೧೧೪೦೩೮೪ ಪುರುಷರು, ೧೧೬೫೦೩೦ ಮಹಿಳೆಯರು ಹಾಗೂ ೮೮ ಇತರೆ ಸೇರಿ ಒಟ್ಟು ೨೩೦೫೫೦೨ ಮತದಾರರಿದ್ದಾರೆ. ಜಿಲ್ಲೆಯಲ್ಲಿರುವ ೨೬೨೭ ಮತಗಟ್ಟೆಗಳಿಗೆ ೨೭೬ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮತದಾರರ ಗುರುತಿನ ಚೀಟಿಗಾಗಿ ಅರ್ಹರಿಂದ ಸ್ವೀಕೃತವಾದ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ವಿಲೇವಾರಿ ಮಾಡಲಾಗುತ್ತಿದ್ದು, ಗುರುತಿನ ಚೀಟಿಗಳನ್ನು ಅಂಚೆ ಮೂಲಕ ಮತದಾರರಿಗೆ ರವಾನಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮತದಾರರ ಪಟ್ಟಿ, ಎಪಿಕ್ ಕಾರ್ಡ್, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ತೆಗೆದುಹಾಕುವುದು, ವರ್ಗಾವಣೆಗಾಗಿ ಅಗತ್ಯ ದಾಖಲೆಗಳೊಂದಿಗೆ ನಿಗಧಿತ ನಮೂನೆಯಲ್ಲಿ ನಿರಂತರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿ ನೋಂದಣಿಗೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ೧೯೫೦ಯನ್ನು ಸಂಪರ್ಕಿಸಬಹುದಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ರೇಷ್ಮ, ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.
(Visited 1 times, 1 visits today)