ತುಮಕೂರು: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಮಾರ್ಚ್ ೨೮ರಂದು ಶ್ರೀ ಅಗ್ನಿಬನ್ನಿರಾಯ ಜಯಂತಿ ಹಾಗೂ ಏಪ್ರಿಲ್ ೨ರಂದು ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ನಿಗಧಿತ ದಿನಾಂಕಗಳAದು ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಯಂತಿ ದಿನದಂದು ಮಹನೀಯರ ತತ್ವಾದರ್ಶಗಳ ಕುರಿತು ಉಪನ್ಯಾಸವನ್ನು ಏರ್ಪಡಿಸಬೇಕು ಎಂದು ತಿಳಿಸಿದರಲ್ಲದೆ, ಜಯಂತಿ ಆಚರಣೆ ಕುರಿತು ಸಮುದಾಯದ ಮುಖಂಡರಿAದ ಸಲಹೆಗಳನ್ನು ಪಡೆದರು.
ಸಮುದಾಯದವರ ಅಭಿಪ್ರಾಯ ಪಡೆದ ನಂತರ ಶ್ರೀ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಾಗೂ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ನಗರದ ಕನ್ನಡಭವನದಲ್ಲಿ ಏರ್ಪಡಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್ ಕುಮಾರ್, ಸಮುದಾಯದ ಮುಖಂಡರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
(Visited 1 times, 1 visits today)