ತುಮಕೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-೧ ಪ್ರಾರಂ ಭವಾಗಿದ್ದು, ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಶ್ರೀ ಶಿವಾನಂದ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಇಂದು ಜಿಲ್ಲಾ ಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿದರು.
ಪರೀಕ್ಷಾ ಕೇಂದ್ರದಲ್ಲಿ ಬೆಳಕು, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯ, ಮುಂಜಾಗ್ರತಾ ಕ್ರಮವಾಗಿ ತುರ್ತು ಚಿಕಿತ್ಸೆ ನೀಡಲು ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಿರುವ ಬಗ್ಗೆ ಪರಿಶೀಲಿಸಿದರು.
ಅಂಗನವಾಡಿ ಕೇಂದ್ರಕ್ಕೆ ಭೇಟಿ: ನಂತರ ಕೊರಟಗೆರೆ ತಾಲೂಕು ತುಂಬಾಡಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮಕ್ಕಳ ಪೋಷಣೆ, ಶೈಕ್ಷಣಿಕ ಚಟುವಟಿಕೆ, ಆರೋ ಗ್ಯ ಸೇವೆ ಹಾಗೂ ಮಕ್ಕಳಿಗಾಗಿ ತಯಾರಿಸಿದ ಆಹಾರದ ಗುಣಮಟ್ಟವನ್ನು ಪರಿ ಶೀಲಿಸಿದರು. ಅಂಗನವಾಡಿ ಕೇಂದ್ರವನ್ನು ಸ್ವಚ್ಛ ವಾಗಿಡಲು ಹಾಗೂ ಸಮರ್ಪಕವಾಗಿ ದಾಖಲೆ ನಿರ್ವಹಣೆ ಮಾಡಲು ಅಂಗನವಾಡಿ ಸಿಬ್ಬಂದಿಗೆ ಸೂಚಿಸಿದರು.
ಸೌರ ಘಟಕ ವೀಕ್ಷಿಸಿದ ಜಿಲ್ಲಾಧಿಕಾರಿ: ಬಳಿಕ ತುಮಕೂರು ತಾಲ್ಲೂಕು ಅರಕೆರೆ ಗ್ರಾಮದ ಗುರುಲಿಂಗಯ್ಯ ಅವರ ಮನೆಯ ಮೇಲ್ಛಾವಣಿಯ ಮೇಲೆ ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಅಳವಡಿಸಿದ್ದ ಸೌರಘ ಟಕವನ್ನು ವೀಕ್ಷಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಮನೆಯ ಮೇಲ್ಛಾವಣಿಯಲ್ಲಿ ಸೌರ ಘಟಕ ಸ್ಥಾಪಿಸಲು ಸಹಾಯಧನ ನೀಡುವ ಮೂಲಕ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದ ಪ್ರತಿ ತಿಂಗಳು ತಮ್ಮ ಮನೆಗೆ ಅಗತ್ಯ ವಿದ್ಯುತ್ತನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಅಲ್ಲದೇ ಹೆಚ್ಚುವರಿ ವಿದ್ಯುತ್ ಅನ್ನು ಬೆಸ್ಕಾಂಗೆ ಮಾರಾಟ ಮಾಡಲು ಅವಕಾಶವಿದೆ ಎಂದು ತಿಳಿಸಿದರು.
ಸೌರ ಘಟಕ ಅಳವಡಿಕೆಯಿಂದ ವಿದ್ಯುತ್ ಖರ್ಚು ಕಡಿಮೆಯಾಗುವುದರ ಜೊತೆಗೆ ಪರಿಸರ ರಕ್ಷಣೆ ಹಾಗೂ ದೇಶದ ವಿದ್ಯುತ್ ಆರ್ಥಿಕತೆಗೂ ಸಹಾಯಕವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೊರಟಗೆರೆ ಗ್ರೇಡ್-೨ ತಹಶೀಲ್ದಾರ್ ರಾಮ್ ಪ್ರಸಾದ್, ಕ್ಷೇತ್ರ ಶಿಕ್ಷ ಣಾಧಿಕಾರಿ ಸಿ.ವಿ. ನಟರಾಜ್, ಬೆಸ್ಕಾಂ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.
(Visited 1 times, 1 visits today)