ತುಮಕೂರು: ಗುಬ್ಬಿ ಪಟ್ಟಣದ ಡಾ: ಗುಬ್ಬಿ ವೀರಣ್ಣ ಟ್ರಸ್ಟ್ ವತಿಯಿಂದ ಗುಬ್ಬಿ ಪಟ್ಟಣದ ಡಾ: ಗುಬ್ಬಿ ವೀರಣ್ಣ ರಂಗಮAದಿರದಲ್ಲಿ ಮಕ್ಕಳಿಗಾಗಿ ಏಪ್ರಿಲ್ ೪ ರಿಂದ ಮೇ ೧೦ರವರೆಗೆ ಬೇಸಿಗೆ ರಂಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ೮ ರಿಂದ ೧೪ ವರ್ಷ ವಯೋಮಾನದ ಮಕ್ಕಳು ಭಾಗವಹಿಸಬಹುದಾಗಿದೆ. ಶಿಬಿರವು ಪ್ರತಿ ದಿನ ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆಯಲಿದೆ. ತರಬೇತಿಗೆ ೧,೦೦೦ ರೂ. ಶುಲ್ಕವನ್ನು ನಿಗಧಿಪಡಿಸಲಾಗಿದ್ದು, ಭಾಗವಹಿಸುವ ಮಕ್ಕಳು ಊಟ, ಉಪಹಾರ ಮತ್ತು ಕುಡಿಯುವ ನೀರನ್ನು ಸ್ವಯಂ ವ್ಯವಸ್ಥೆ ಮಾಡಿಕೊಳ್ಳಬೇಕು. ಆಯ್ಕೆಯಾದ ಮಕ್ಕಳು ಟ್ರಸ್ಟ್ ಕಾಲ ಕಾಲಕ್ಕೆ ರೂಪಿಸುವ ನಿಯಮಗಳಿಗೆ ಬದ್ಧರಾಗಿರಬೇಕು. ಶಿಬಿರದಲ್ಲಿ ಭಾಗವಹಿಸಲಿಚ್ಛಿಸುವ ಮಕ್ಕಳು ನಿಗಧಿತ ಅರ್ಜಿ ನಮೂನೆಯನ್ನು ಗುಬ್ಬಿ ಪಟ್ಟಣದ ಡಾ: ಗುಬ್ಬಿ ವೀರಣ್ಣ ರಂಗಮAದಿರದಿAದ ಪಡೆದು, ಭರ್ತಿ ಮಾಡಿದ ಆರ್ಜಿಯನ್ನು ಏಪ್ರಿಲ್ ೫ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: ೦೮೧೩೧-೨೨೩೩೩೬ / ೦೮೧೬-೨೨೭೫೨೦೪, ಮೊ.ಸಂ.೮೫೪೬೯೪೮೮೫೮ನ್ನು ಸಂಪರ್ಕಿಸಬೇಕೆAದು ತಿಳಿಸಿದ್ದಾರೆ.
(Visited 1 times, 1 visits today)