ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆಯು ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಏಪ್ರಿಲ್ ೨೧ ರಿಂದ ೨೩ರವರೆಗೆ ೩ ದಿನಗಳ ಕಾಲ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಕಮ್ಮಟವನ್ನು ಏರ್ಪಡಿಸಿದ್ದು, ಕಮ್ಮಟದಲ್ಲಿ ಭಾಗವಹಿಸಲು ಆಸಕ್ತಿಯಿರುವವರಿಂದ ಅರ್ಜಿ ಆಹ್ವಾನಿಸಿದೆ. ಕಮ್ಮಟವು ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆಸಲಾಗುವುದು. ಆಸಕ್ತ ೨೦ ರಿಂದ ೪೫ ವರ್ಷಗೊಳಗಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ ೫ ಕಡೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಾಲತಾಣ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ಸಂಪರ್ಕಿಸಬಹುದಾಗಿದೆ ಎಂದು ರಿಜಿಸ್ಟಾçರ್ ಕರಿಯಪ್ಪ ಎನ್. ತಿಳಿಸಿದ್ದಾರೆ.
(Visited 1 times, 1 visits today)