ಮಧುಗಿರಿ: ಕುಂಚಿಟಿಗ ಸಮಾಜ ಅತ್ಯಂತ ಹಿಂದುಳಿದ ಸಮಾಜ ವಾಗಿದ್ದು ಆ ಸಮಾಜಕ್ಕೆ ರಾಜಕೀಯ ಸಾಮಾಜಿಕ ಶೈಕ್ಷಣಿಕವಾಗಿ ಸ್ಥಾನಮಾನ ದೊರಕಿಸುವ ಕೆಲಸ ಸರ್ಕಾರ ಮಾಡಬೇಕಾಗಿದೆ ಎಂದು ಎಲೆರಾಂಪುರದ ಕುಂಚಿಟಿಗ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದ್ದಾರೆ.
ತಾಲೂಕಿನ ಕಸಬಾ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಕಡೂತಿ ವೇಣುಗೋಪಾಲಸ್ವಾಮಿ ದೇವಸ್ಥಾನದ ಸಮುದಾಯ ಭವನದ ಲೋಕಾರ್ಪಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ ಕುಂಚಿಟಿಗ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕಾಗಿದೆ ಕುಂಚಿಟಿಗ ಸಮಾಜದ ಕುಲಶಾಸ್ತ್ರ ಅಧ್ಯಯನ ಮುಗಿದಿದ್ದು ಓಬಿಸಿ ಮೀಸಲಾತಿ ನೀಡಬೇಕಾಗಿದೆ ರಾಜ್ಯ ಸಚಿವ ಸಂಪುಟ ಕುಂಚಿಟಿಗ ಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದು ಕೇಂದ್ರ ಸರ್ಕಾರ ಕುಂಚಿಟಿಗ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ತಿಳಿಸಿದರು .
ದೇವಸ್ಥಾನಗಳು ಮತ್ತು ಧಾರ್ಮಿಕ ಕೇಂದ್ರಗಳು ಮನುಷ್ಯನ ನೆಮ್ಮದಿ ಕೇಂದ್ರಗಳಾಗಬೇಕು ಪ್ರತಿ ಗ್ರಾಮಗಳಲ್ಲಿ ದೇವಸ್ಥಾನ ಜೊತೆ ಶಾಲೆಗಳನ್ನು ನಿರ್ಮಿಸಬೇಕಾಗಿದೆ ಇದರಿಂದ ಪ್ರತಿಯೊಬ್ಬರು ವಿದ್ಯಾವಂತರಾಗಬಹುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳಿದರ ಹಾಲಪ್ಪ ಭವಿಷ್ಯದಲ್ಲಿ ಮಕ್ಕಳಿಗೆ ಉತ್ತಮ ಮತ್ತು ಗುಣಾತ್ಮಕ ಶಿಕ್ಷಣ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರು ಮಾಡಬೇಕಾಗಿದೆ ಮತ್ತು ಸ್ವಯಂ ಉದ್ಯೋಗಕ್ಕೂ ಆದ್ಯತೆಯ ನೀಡಬೇಕಾಗಿದೆ ಎಂದ ಅವರು ಯುವಕರು ಮುಖ್ಯವಾಹಿನಿಗೆ ಬರಬೇಕು ದೇವಸ್ಥಾನದ ವತಿಯಿಂದ ಪ್ರತಿವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಂತೆ ತಿಳಿಸಿದವರು.
ಅದೇ ರೀತಿ ಪ್ರತಿವಾರ ದೇವಸ್ಥಾನದ ವತಿಯಿಂದ ದಾಸೋಹ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು ಈ ಸಂದರ್ಭದಲ್ಲಿ ಕಾರ್ಮಿಕ ಆಯುಕ್ತರಾದ ವೇಣುಗೋಪಾಲ್ ದೇವಸ್ಥಾನ ಸಮಿತಿ ಅಧ್ಯಕ್ಷರಾದ ರಂಗನಾಥ್ ಕಾರ್ಯದರ್ಶಿ ವೇಣುಗೋಪಾಲ್ ಮುಖಂಡರಾದ ರಾಜಣ್ಣ ಉಮೇಶ್ ಮತ್ತಿತರರು ಹಾಜರಿದ್ದರು
(Visited 1 times, 1 visits today)