ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.
ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ ೧೬೮ ಪರಿಶಿಷ್ಟ ಜಾತಿ ಹಾಗೂ ೩೨ ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು ೨೦೦ ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇAದ್ರ ಸ್ವಾಮಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ, ಆಯುಕ್ತ ಹೇಮಂತ್ ಎಂ.ನಿAಬಾಳ್ಕರ್ ಸೇರಿದಂತೆ ಹಲವರು ಇದ್ದರು. ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೂ ಕಿಟ್ ವಿತರಣೆ: ಜಿಲ್ಲೆಯ ಹಿರಿಯ ಪತ್ರಕರ್ತ ಎನ್.ಡಿ. ರಂಗರಾಜು ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಧ್ಯಮ ಕಿಟ್ ವಿತರಿಸಿದರು. ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಜಿಲ್ಲೆಯ ಉಳಿದ ಪತ್ರಕರ್ತರಿಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಗುರುವಾರ ಮಾಧ್ಯಮ ಕಿಟ್ ವಿತರಿಸಲಾಯಿತು.

(Visited 1 times, 1 visits today)