ತುರುವೇಕೆರೆ: ವಿಧಾನ ಪರಿಷತ್‌ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ನೇತೃತ್ವದಲ್ಲಿ ಮುಂಬರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾ ಯಿತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಕಛೇರಿಯಲ್ಲಿ ಇತ್ತಿಚೀಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಜನರ ಮನಸ್ಸನ್ನು ಸೂರೆಗೊಂಡಿದೆ. ಕಾಂಗ್ರೆಸ್ ಬಡವರ ಪರವಾದ ಪಕ್ಷ ಎಂಬ ಮಾತು ಎಲ್ಲೆಡೆ ಇದೆ. ಈಗಾಗಲೇ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ನಲ್ಲಿ ಪುನಃ ಗ್ಯಾರಂಟಿಗಳನ್ನು ಮುಂದು ವರೆಸಿದ್ದಾರೆ. ಇವೆಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾಗಿದೆ. ಮುಂಬರುವ ಯಾವುದೇ ಚುನಾ ವಣೆಯಲ್ಲಿ ಕಾಂಗ್ರೆಸ್ ಪಕ್ಷ ಜನರ ಆಶೀರ್ವಾದ ಗಳಿಸಲಿದೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಧೃಢವಾಗಿದೆ. ಹಾಗೆಯೇ ತುರುವೇಕೆರೆ ವಿಧಾನಸಭಾ ಕ್ಷೇತ್ರ ದಲ್ಲೂ ಸಹ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪ ಡಿಸಬೇಕಿದೆ. ಎಲ್ಲ ಮುಖಂಡರೂ ಒಂದಾಗಿ ಪಕ್ಷ ನಿಷ್ಠೆ ತೋರಿದಲ್ಲಿ ಕಾಂಗ್ರೆಸ್ ಇಲ್ಲೂ ಗೆಲು ವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ. ವಿಧಾನ ಪರಿಷತ್‌ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಗಟ್ಟಿಗೊಳಿಸಿ ಎಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಕಿವಿಮಾತು ಹೇಳಿದರು.
ವಿಧಾನ ಪರಿಷತ್‌ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಮಾತನಾಡಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಕೋಟ್ಯಾಂತರ ಬಡವರ ಮನೆಗಳು ಬೆಳಗಿವೆ. ಹಸಿವಿನಿಂದ ಯಾರೊಬ್ಬರೂ ಇಲ್ಲ ಎನ್ನುವ ಮಟ್ಟಕ್ಕೆ ಭರವಸೆ ಮೂಡಿದೆ. ಕಾಂಗ್ರೆಸ್ ಎಂದೆA ದೂ ಬಡವರ ಪರವಿರುವುದರಿಂದ ಬಡವರು ಸೇರಿದಂತೆ ಎಲ್ಲಾ ಸಮುದಾಯದ ಜನರು ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣನವರನ್ನು ತಾಲೂಕು ಕಾಂಗ್ರೆಸ್ ವತಿಯಿಂದ ಗೌರವಿಸಲಾಯಿತು. ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಗುಡ್ಡೇನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ಸಿ.ಎಸ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಳಾಲ ನಾಗರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎನ್. ಆರ್.ಜಯರಾಮ್, ಶ್ರೀನಿವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಗೋಣಿತುಮಕೂರು ಲಕ್ಷಿ÷್ಮÃಕಾಂತ್ ಸೇರಿದಂತೆ ಹಲವಾರು ಮಂದಿ ಇದ್ದರು.
(Visited 1 times, 1 visits today)