ತುಮಕೂರು: ಯುಜಿಸಿ ನಿರ್ದೇಶನದಂತೆ ಮೈಸೂರಿನ ಕರಾಮುವಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ೨೦೨೫ರ ಮಾರ್ಚ್ ೩೧ ಅಂತಿಮ ದಿನಾಂಕವಾಗಿರುವುದರಿAದ, ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಸಾರ್ವತ್ರಿಕ ರಜಾ ದಿನಗಳಾದ ಮಾರ್ಚ್ ೩೦ರ ಚಾಂದ್ರಮಾನ ಯುಗಾದಿ (ಭಾನುವಾರ) ಮತ್ತು ಮಾರ್ಚ್ ೩೧ರ ರಂಜಾನ್ (ಸೋಮವಾರ) ದಿನಗಳಂದು ಕರಾ ಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಕಛೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು.
ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಯುಜಿಸಿ ಅನುಮೋದಿತ ಸ್ನಾತ ಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ., ಎಂ.ಎ/ಎA.ಸಿ.ಜೆ., ಎಂ.ಕಾA., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿ ಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ೧೦+೨ (ಪದವಿ ಪೂರ್ವ) ಮತ್ತು ೧೦+೨+೩ (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಪದವಿ ಪಡೆಯ ಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ*: ಪ್ರಾದೇ ಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್ ಗಾಂಧಿ ನಗರ, ಗಂಗಸAದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-೫೭೨೧೦೫ ದೂರವಾಣಿ ಸಂಖ್ಯೆ- ೦೮೧೬-೨೯೫೫೫೮೦, ೯೮೪೪೫೦೬೬೨೯, ೯೮೮೬೧೧೨೪೩೪, ೭೩೪೯೪೭೪೩೩೯ ಅನ್ನು ಸಂಪ ರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(Visited 1 times, 1 visits today)