ತುಮಕೂರು: ಜಿಲ್ಲೆಯಲ್ಲಿ ೨೦೨೪ರ ಜನವರಿಯಿಂದ ಈವರೆಗೆ ೧೪೧ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ೧೭೬ ಸಂತ್ರಸ್ತರಿಗೆ ೧,೧೯,೧೩,೫೦೦ ರೂ.ಗಳ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಅಪರ ಜಿಲ್ಲಾ ಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂ ಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಜಾಗೃತಿ ಉಸ್ತು ವಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕಳೆದ ಕ್ಯಾಲೆಂಡರ್ ವರ್ಷದ ಜನವರಿ ಮಾಹೆಯಿಂದ ೨೦೨೫ರ ಮಾರ್ಚ್ ೨೭ರವರೆಗೆ ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬAಧಿಸಿದAತೆ ೧೧೨ ಪ್ರಕರಣಗಳಲ್ಲಿ ೧೪೦ ನೊಂದ ಪರಿಶಿಷ್ಟ ಜಾತಿ ಯ ಸಂತ್ರಸ್ತರಿಗೆ ೯೭,೩೮,೫೦೦ ರೂ. ಹಾಗೂ ೨೯ ಪ್ರಕರಣಗಳಲ್ಲಿ ೩೬ ಪರಿಶಿಷ್ಟ ವರ್ಗದ ಸಂತ್ರಸ್ತರಿಗೆ ೨೧,೭೫,೦೦೦ ರೂ.ಗಳ ಪರಿಹಾರವನ್ನು ಮಂಜೂರು ಮಾಡಲಾಗಿದೆ ಎಂದು ಸಭೆಯಲ್ಲಿ ಹಾಜರಿದ್ದ ದಲಿತ ಮುಖಂಡರ ಗಮನಕ್ಕೆ ತಂದರು.
ಜಿಲ್ಲೆಯಲ್ಲಿ ಕಳೆದ ವರ್ಷದಿಂದ ಈವರೆಗೂ ೩೦೦ಕ್ಕೂ ಹೆಚ್ಚು ದಲಿತ ದೌರ್ಜನ್ಯ ಪ್ರಕರಣಗಳು ವರದಿಯಾಗಿರುವುದಲ್ಲದೆ, ದಿನೇ ದಿನೇ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ದಲಿತರ ದೌರ್ಜನ್ಯ ಪ್ರಕರಣಗಳು ವರದಿಯಾ ದಾಗ ಪೊಲೀಸ್ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಇದೇ ರೀತಿ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೂ ಸರಿಸಮ ನಾದ ವೇತನವನ್ನು ನೀಡಬೇಕೆಂದು ಸಂಬAಧಿಸಿದ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ಮಶನಕ್ಕಾಗಿ ನಿಗಧಿಪಡಿಸಿರುವ ಜಾಗಗಳನ್ನು ೧೫ ದಿನಗಳೊಳಗಾಗಿ ಸ್ವಚ್ಛಗೊಳಿಸಿ ಮೂಲ ಸೌಕರ್ಯಗಳನ್ನು ಒದಗಿಸ ಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯ ದರ್ಶಿ ಸಂಜೀವಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಉಪ ವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಹಾಗೂ ಗೋಟೂರು ಶಿವಪ್ಪ, ಆಹಾರ ಮತ್ತು ನಾಗರೀಕ ಜಂಟಿ ನಿರ್ದೇ ಶಕ ಮಂಟೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಗೂ ದಲಿತ ಸಮುದಾಯದ ಮುಖಂಡರು, ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿಯ ಸದಸ್ಯರು ಹಾಜರಿದ್ದರು.
(Visited 1 times, 1 visits today)