ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮದ ೮೫೦ವರ್ಷಗಳ ಇತಿಹಾಸವುಳ್ಳ ಶ್ರೀವೀರನಾಗಮ್ಮ ತಾಯಿಯ ಯುಗಾದಿ ಜಾತ್ರಾ ಮಹೋತ್ಸವವು ಲಕ್ಷಾಂತರ ಮಂದಿ ಭಕ್ತರ ಸಮ್ಮುಖದಲ್ಲಿ ಸೋಮವಾರ ವಿಜೃಂಭಣೆಯಿAದ ನಡೆಯಿತು.
ಪ್ರತಿವರ್ಷ ಯುಗಾದಿ ಮರುದಿನ ನಡೆಯುವ ಶ್ರೀವೀರನಾಗಮ್ಮ ತಾಯಿ ಜಾತ್ರೆಯು ರಥೋತ್ಸವದೊಂದಿಗೆ ವಿಜೃಂಭಣೆಯಿAದ ನಡೆದಿದೆ. ಈ ವರ್ಷ ದೇವಾಲಯದ ಆಡಳಿತ ಮಂಡಳಿಯಿAದ ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ತೇರಿನ ರಥದಲ್ಲಿ ವೀರನಾಗಮ್ಮ ತಾಯಿ ಮೆರವಣಿಗೆ ವಿಗ್ರಹವನ್ನು ರಥದಲ್ಲಿ ಕೂರಿಸಿ ಸಂಪ್ರಾದಾಯಿಕ ಸಕಲ ಪೂಜೆಗಳನ್ನು ನೆರವೇರಿಸಿದ ಬಳಿಕ ಎಲೆರಾಂಪುರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಜಾತ್ರೆಗೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ತಾಯಿಗೆ ಇಷ್ಟಾರ್ಥಗಳನ್ನು ಸಲ್ಲಿಸುವಂತೆ ಪೂಜೆ ಸಲ್ಲಿಸಿ ಹರಕೆ ತೀರಿಸಿ ವೀರನಾಗಮ್ಮ ತಾಯಿಯ ರಥ ಎಳೆದು ತಾಯಿಯ ವೈಭವವನ್ನು ಕಣ್ತುಂಬಿಕೊAಡರು. ಆಗಮಿಸಿದ ಭಕ್ತಾಧಿಗಳಿಗೆ ಆಡಳಿತ ಮಂಡಳಿಯಿAದ ವಿಶೇಷ ದರ್ಶನ ವ್ಯವಸ್ಥೆ, ಪ್ರಸಾದ ವ್ಯವಸ್ಥೆ ಆಯೋಜನೆ ಮಾಡಲಾಗಿತ್ತು.
ದೇವಾಲಯದ ಪ್ರಧಾನ ಅರ್ಚಕ ಶಿವಕುಮಾರ್ ಮಾತನಾಡಿ, ವಡ್ಡಗೆರೆ ವೀರನಾಗಮ್ಮ ತಾಯಿ ದೇವಾಲಯಕ್ಕೆ ಪುರಾತನ ಇತಿಹಾಸವಿದೆ. ಪ್ರತಿವರ್ಷ ಯುಗಾದಿ ಮಾರನೇ ದಿನ ಅದ್ಧೂರಿ ಜಾತ್ರೆ ನಡೆಯುತ್ತದೆ. ಆಡಳಿತ ಮಂಡಳಿಯು ನಿರ್ಮಿಸಿದ ರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಲೋಕಾರ್ಪಣೆಗೊಂಡಿದೆ. ರಥೋತ್ಸವ ಸಂದರ್ಭದಲ್ಲಿ ಆಂದ್ರಪ್ರದೇಶ, ತಮಿಳುನಾಡು, ಮಹಾರಾಷ್ಟç ಹೀಗೆ ರಾಜ್ಯದ ಅನೇಕ ಭಾಗಗಳಿಂದ ಆಗಮಿಸಿ ತಾಯಿಯ ದರ್ಶನ ಪಡೆದು ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ ಎಂದರು.
ಈ ವೇಳೆ ಅಡಳಿತ ಮಂಡಳಿ ಅಧ್ಯಕ್ಷ ವಿ.ಎನ್ ವೀರಕ್ಯಾತಯ್ಯ, ಕಾರ್ಯದರ್ಶಿ ನಾಗೇಶ್.ವಿ, ನಿರ್ದೇಶಕ ಶಿವಕುಮಾರ್, ರಾಮಯ್ಯ, ವಿ.ಎನ್ ವೀರನಾಗಪ್ಪ ಸೇರಿದಂತೆ ಲಕ್ಷಾಂತರ ಭಕ್ತರು ಹಾಜರಿದ್ದರು.
ವಿವಾಹ ಭಾಗ್ಯ, ಸಂತಾನ ಭಾಗ್ಯ, ಆರೋಗ್ಯ ಭಾಗ್ಯ ಈಗೇ ಅನೇಕ ಭಕ್ತರ ಹರಿಕೆಗಳನ್ನು ಈಡೇರಿಸುತ್ತ ಬಂದಿರುವ ವರಪುರ ವಡ್ಡಗೆರೆ ವೀರನಾಗಮ್ಮ ತಾಯಿಯ ಮಹಿಮೆ ಅಪಾರ. ಇಂದು ಜಾತ್ರೆಯು ವಿಜೃಂಭಣೆಯಿAದ ನಡೆದಿದ್ದು, ರಥೋತ್ಸವದ ವೇಳೆ ಲಕ್ಷಾಂತರ ಭಕ್ತರು ಪಾಲ್ಗೊಂಡು ತಾಯಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಆಡಳಿತ ಮಂಡಳಿಯು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಭಕ್ತರಿಗೆ ಸಕಲ ವ್ಯವಸ್ಥೆ ಕಲ್ಪಿಸಿದೆ.
ಡಾ.ಶ್ರೀಹನುಮಂತನಾಥ ಸ್ವಾಮೀಜಿ
ಪೀಠಾಧ್ಯಕ್ಷರು, ಶ್ರೀಮಠ ಎಲೆರಾಂಪುರ.
ವಡ್ಡಗೆರೆ ವೀರನಾಗಮ್ಮ ತಾಯಿಯ ಮಹಿಮೆ ಅರಿತವರ ಬದುಕು ಬಂಗಾರವಾಗಿದೆ. ತಾಯಿಗೆ ರಾಜ್ಯ ಸೇರಿ ಹೊರ ರಾಜ್ಯಗಳಲ್ಲೂ ಭಕ್ತರ ಸಂಖೈ ಗಣನೀಯವಾಗಿದೆ. ಎಲೆರಾಂಪುರ ಶ್ರೀಮಠದ ಪೂಜ್ಯರಿಂದ ಇಂದು ತಾಯಿಯ ರಥವು ಲೋಕಾರ್ಪಣೆಗೊಂಡಿದೆ. ಯುಗಾದಿ ಹಬ್ಬದ ಜಾತ್ರಾ ಮಹೋತ್ಸವವು ಆಡಳಿತ ಮಂಡಳಿಯ ಶ್ರಮದಿಂದ ಯಶಸ್ಸು ಕಂಡಿದೆ.
ಮುರುಳಿಧರ ಹಾಲಪ್ಪ
ಮಾಜಿ ಅಧ್ಯಕ್ಷ, ಕೌಶಲ್ಯಾಭಿವೃದ್ಧಿ ನಿಗಮ ಮಂಡಳಿ.