ತುಮಕೂರು: ಜಿಲ್ಲೆಯ ತುಮಕೂರು, ಶಿರಾ ಹಾಗೂ ತಿಪಟೂರು ತಾಲ್ಲೂಕಿನಲ್ಲಿ ಏಪ್ರಿಲ್ ೧೬ ಹಾಗೂ ೧೭ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಏಅಇಖಿ) ನಡೆಯಲಿದ್ದು, ಪರೀಕ್ಷೆಯನ್ನು ಲೋಪದೋಷವಿಲ್ಲದಂತೆ ನಡೆಸುವ ಹಿನ್ನೆಲೆಯಲ್ಲಿ ನಿಯೋಜಿತ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಪರೀಕ್ಷಾ ಕಾರ್ಯ ವಿಧಾನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗ ಣದಲ್ಲಿ ಸೋಮವಾರ ಸಂಜೆ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ೨೫ ಕೇಂದ್ರಗಳಲ್ಲಿ ಕೆಸಿಇಟಿ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ವೇಳಾಪಟ್ಟಿ ಹಾಗೂ ಪರೀಕ್ಷಾರ್ಥಿಗಳ ಮಾಹಿತಿ ಲಭ್ಯವಿರಬೇಕು. ಪರೀಕ್ಷೆಗಾಗಿ ನಿಯೋಜಿಸಲಾದ ಅಧಿಕಾರಿ/ಸಿಬ್ಬಂದಿಗಳ ಹೊಣೆಗಾರಿಕೆಗೆ ಸಂಬAಧಿಸಿದAತೆ ಅಗತ್ಯ ತರಬೇತಿ ನೀಡಬೇ ಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ ಅವರಿಗೆ ಸೂಚನೆ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇ ಶಕ ಬಾಲಗುರುಮೂರ್ತಿ ಸಭೆಗೆ ಮಾಹಿತಿ ನೀಡುತ್ತಾ, ಏಪ್ರಿಲ್ ೧೬ರಂದು ಭೌತಶಾಸ್ತç(ಬೆಳಿಗ್ಗೆ ೧೦.೩೦ ರಿಂದ ೧೧.೫೦ ಗಂಟೆವರೆಗೆ) ಹಾಗೂ ರಸಾಯನ ಶಾಸ್ತç(ಮಧ್ಯಾಹ್ನ ೨.೩೦ ರಿಂದ ೩.೫೦), ಏಪ್ರಿಲ್ ೧೭ರಂದು ಗಣಿತಶಾಸ್ತç(ಬೆಳಿಗ್ಗೆ ೧೦.೩೦ ರಿಂದ ೧೧.೫೦ ಗಂಟೆವರೆಗೆ) ಹಾಗೂ ಜೀವಶಾಸ್ತç(ಮಧ್ಯಾಹ್ನ ೨.೩೦ ರಿಂದ ೩.೫೦) ಪರೀಕ್ಷೆಗಳು ನಡೆಯಲಿವೆ. ತುಮಕೂರಿನ ೧೮ ಪರೀಕ್ಷಾ ಕೇಂದ್ರಗಳಲ್ಲಿ ೭೭೨೬, ಶಿರಾ ತಾಲ್ಲೂಕಿನ ೩ ಕೇಂದ್ರಗಳಲ್ಲಿ ೧೬೯೭ ಹಾಗೂ ತಿಪಟೂರು ತಾಲ್ಲೂಕಿನ ೪ ಕೇಂದ್ರಗಳಲ್ಲಿ ೨೧೪೭ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೧೧,೫೭೦ ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಾಲೇಜುಗಳ ಪ್ರಾಂಶು ಪಾಲರು ಹಾಗೂ ಮುಖ್ಯ ಅಧೀಕ್ಷರು ಮತ್ತಿತರರು ಹಾಜರಿದ್ದರು.
(Visited 1 times, 1 visits today)