ತುರುವೇಕೆರೆ: ಬಡವರ ಹೆಸರಿನಲ್ಲಿ ಬಹು ವರ್ಷ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಬಡವರ ಶೋಷಣೆ ಮಾಡಿದೆ ಎಂದು ಬಿಜೆಪಿ ಘಟಕದ ತಾಲೂಕು ಅಧ್ಯಕ್ಷ ಮೃತ್ಯಂಜಯ ಆಪಾದಿಸಿದರು.
ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಬಾನುವಾರ ನಡೆದ ಬಿಜೆಪಿಯ ೪೫ ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಕುತಂತ್ರಕ್ಕೆ ಹೆಸರುವಾಸಿ. ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ. ಮುಸ್ಲಿಮರನ್ನು ಓಟ್ ಬ್ಯಾಂಕ್ ಮಾಡಿಕೊಳ್ಳಲು ದೇಶದ ಸವಲತ್ತುಗಳನ್ನು ಅವರಿಗೆ ನೀಡಲು ಮುಂದಾಗಿದೆ. ಇದುವರೆಗೂ ವಕ್ಫ್ ಕಾಯ್ದೆಯಡಿ ದೇಶವನ್ನು ಲೂಟಿ ಮಾಡಿದ್ದವರನ್ನು ನಮ್ಮ ಬಿಜೆಪಿ ಸರ್ಕಾರ ಮಟ್ಟ ಹಾಕಲು ಮುಂದಾಗಿದೆ. ಕಾಂಗ್ರೆಸ್ ನಿಜವಾದ ರಾಷ್ಟçದ್ರೋಹಿ ಪಕ್ಷವಾಗಿದೆ ಎಂದು ಕಿಡಿಕಾರಿದರು.
ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷ ಸಾಗರನಹಳ್ಳಿ ವಿಜಯಕುಮಾರ್ ಮಾತನಾಡಿ ದೇಶದಲ್ಲಿ ಸಮಾನತೆಯನ್ನು ಸಾರುವಲ್ಲಿ ಭಾರತೀಯ ಜನತಾ ಪಕ್ಷ ತನ್ನದೇ ಆದ ಕೊಡುಗೆ ನೀಡಿದೆ ಎಂದು ದೇಶದ ಐಕ್ಯತೆಗೆ ಧಕ್ಕೆ ಬಂದ ವೇಳೆ ಸ್ವತಂತ್ರವಾಗಿ ೧೯೮೦ ರಲ್ಲಿ ಬಿಜೆಪಿ ಅಸ್ಥಿತ್ವಕ್ಕೆ ಬಂದಿತು. ಅಂದಿನಿAದಲೂ ಬಿಜೆಪಿ ರಾಷ್ಟçದ ಸಮಗ್ರತೆಗೆ ಹೋರಾಟ ನಡೆಸುತ್ತಿದೆ. ದೇಶದಲ್ಲಿ ಒಂದೇ ಕಾನೂನು, ಒಂದೇ ರಾಷ್ಟçಧ್ವಜ, ಒಂದೇ ಸಂವಿಧಾನ ಇರಬೇಕೆಂಬ ಅಚಲ ನಂಬಿಕೆಯನ್ನು ಹೊಂದಿದೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ರವರ ನೇತೃತ್ವದಲ್ಲಿ ಅಖಂಡ ಹಿಂದೂಸ್ಥಾನ ಮಾಡಬೇಕೆಂಬ ಅಭಿಲಾ ಷೆ ಹೊಂದಲಾಗಿದೆ. ದೇಶಕ್ಕೆ ಸ್ವಾತಂತ್ರ÷್ಯ ಬಂದ ದಿನದಿಂದ ಇಂದಿನವರೆಗೆ ಆಡಳಿತ ನಡೆಸಿರುವ ಸರ್ಕಾರಗಳಲ್ಲಿ ಮುಸ್ಲಿಮರು ಮತ್ತು ದಲಿತರು ನೆಮ್ಮದಿಯ ಜೀವನ ನಡೆಸಿದ್ದಾರೆ ಎಂದರೆ ಅದು ಬಿಜೆಪಿಯ ಸರ್ಕಾರದಲ್ಲಿ ಮಾತ್ರ. ಮುಸ್ಲಿಮರನ್ನು ಮತ್ತು ದಲಿತರನ್ನು ಕಾಂಗ್ರೆಸ್ ಓಟ್ ಬ್ಯಾಂಕ್ ಆಗಿ ಮಾಡಿಕೊಂಡಿತ್ತೇ ವಿನಃ ಅವರ ಶ್ರೇಯೋಭಿವೃದ್ದಿಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಬಿಜೆಪಿ ಮುಸ್ಲಿಂ ಸಮು ದಾಯದ ಮತ್ತು ಬುಡಕಟ್ಟು ಜನಾಂಗದ ಮಹಿಳೆಗೆ ದೇಶದ ಸರ್ವ ಶ್ರೇಷ್ಠ ಹುದ್ದೆ ನೀಡಿ ಮಾದರಿಯಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಮಾಚೇನಹಳ್ಳಿ ರಾಮಣ್ಣ, ಜಿಲ್ಲಾ ಮಹಿಳಾ ಉಪಾಧ್ಯಕ್ಷೆ ಅನಿತಾ ನಂಜುAಡಯ್ಯ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಚೂಡಾಮಣಿ, ದಲಿತ ಮುಖಂಡ ಸೋಮೇನಹಳ್ಳಿ ಜಗದೀಶ್, ಜಿಲ್ಲಾ ಎಸ್ ಟಿ ಘಟಕದ ಉಪಾಧ್ಯಕ್ಷೆ ಉಮಾರಾಜ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸ್ವಪ್ನಾ ನಟೇಶ್, ಸದಸ್ಯ ಚಿದಾನಂದ್, ತಾಲೂಕು ಕಾರ್ಯದರ್ಶಿ ಪ್ರಕಾಶ್, ಮುಖಂಡರಾದ ಕಣತೂರು ನಾಗೇಶ್, ಹರಿಕಾರನಹಳ್ಳಿ ಪ್ರಸಾದ್, ನವೀನ್ ಬಾಬು, ಸಿದ್ದಪ್ಪಾಜಿ, ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.
(Visited 1 times, 1 visits today)