ಕೊರಟಗೆರೆ: ಮಕ್ಕಳ ಸಾಧನೆಗೆ ಶಿಕ್ಷಣ ಮತ್ತು ಪೌಷ್ಠಿಕ ಆಹಾರ ಅಗತ್ಯ. ಪೌಷ್ಠಿಕ ಆಹಾರದ ಕೊರತೆ ಯಿಂದ ಮಗುವಿನ ಬುದ್ಧಿ ಬೆಳವಣಿಗೆಯಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇರುತ್ತದೆ ಎಂದು ಪ.ಪಂ ಸದಸ್ಯೆ ಭಾಗ್ಯಮ್ಮ ತಿಳಿಸಿದರು.
ಪಟ್ಟಣದ ಗಂಗಮ್ಮ ದೇವಾಲಯ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಆಯೋಜಿಸಿದ್ದ ಪೋಷಣ್ ಅಭಿಯಾನ ಯೋಜನೆಯ ‘‘ಪಕ್ವಾಡ್ ಅಭಿಯಾನ ಕಾರ್ಯಕ್ರಮವನ್ನು’’ ಉದ್ಘಾಟಿಸಿ ಮಾತನಾಡಿದರು.
ಮಗು ಮತ್ತು ತಾಯಿ ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಬೇಕೆಂದರೆ ಪೌಷ್ಠಿಕ ಆಹಾರ ಬಹಳ ಮುಖ್ಯ, ಈ ನಿಟ್ಟಿನಲ್ಲಿ ಸರ್ಕಾರ ತಾಯಿ ಹಾಗೂ ಮಗುವಿನಲ್ಲಿ ಪೌಷ್ಠಿಕತೆ ಹೆಚ್ಚಿಸಲು ಅಂಗನವಾಡಿಗಳ ಮೂಲಕ ಪೌಷ್ಠಿಕ ಆಹಾರ ವಿತರಿಸಲಾಗುತ್ತಿದೆ. ಹೆಚ್ಚಿನ ಸಂಖೈಯು ಬಡ ತಾಯಂದಿರು ಮತ್ತು ಮಕ್ಕಳಿಗೆ ಈ ಯೋಜನೆಯು ವರದಾನವಾಗಿದೆ ಎಂದು ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಬಿಕಾ ಮಾತನಾಡಿ, ಪೋಷಣ್ ಪಕ್ವಾಡ್ ಅಭಿಯಾನ ದೇಶದ್ಯಾಂತ ೧೫ದಿನಗಳ ಕಾಲ ನಡೆಯುತ್ತದೆ. ಮಕ್ಕಳ, ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡುವ, ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಕಂಡುಬರುವ ರಕ್ತ ಹೀನತೆ ಹೋಗಲಾಡಿಸಿ ತಾಯಂದಿರ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಮಗು ತಾಯಿಯ ಗರ್ಭದಲ್ಲಿ ಇರುವಾಗಲೇ ತಾಯಿಗೆ ಮತ್ತು ಮಗುವಿಗೆ ಉತ್ತಮ ಆರೋಗ್ಯ ನೀಡುವಲ್ಲಿ ಪೌಷ್ಟಿಕಾಂಶವಿರುವ ಆಹಾರ, ಉಚಿತ ಆರೋಗ್ಯ ತಪಾಸಣೆ, ಕಾಲ ಕಾಲಕ್ಕೆ ಆರೋಗ್ಯ ಸಲಹೆ, ಚುಚ್ಚು ಮದ್ದು, ಅಗತ್ಯ ಔಷದೋಪಚಾರಗಳನ್ನು ಸರ್ಕಾರ ನಿಯಮಿತವಾಗಿ ಆಶಾ ಕಾರ್ಯರ್ತೆಯರ ಮೂಲಕ ನೀಡುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು. ಈ ಸಂದರ್ಭದಲ್ಲಿ ಅತಿಥಿ ಕಲೀಮ್, ಮೇಲ್ವಿಚಾರಕಿ ಮಮ್ತಾಜ್, ಯೋಜನೆಯ ತಾಲ್ಲೂಕು ಸಂಯೋಜಕ ಮೋಹನ್ ಹಾಜರಿದ್ದರು.
(Visited 1 times, 1 visits today)