ಮಧುಗಿರಿ: ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ನೆರೆಗಾ ಯೋಜನೆ ಅಡಿಯಲ್ಲಿ ಉತ್ತಮ ಕೆಲಸ ಆಗಿರುವ ಬಗ್ಗೆ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದರೆ.
ನರೇಗಾ ಕಾಮಗಾರಿ ವೀಕ್ಷಿಸಲು ಕೇಂದ್ರದಿAದ ಆಗಮಿಸಿದ್ದ ತಂಡದೊAದಿಗೆ ಕಾಮಗಾರಿ ವೀಕ್ಷಿಸಿ ಮಾತನಾಡಿದ ಸಹಕಾರ ಸಚಿವರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಚ್ಚು ಶ್ರಮವಹಿಸಿ ರೈತರಿಗೆ ತಮ್ಮ ಜಮೀನಿನಲ್ಲಿ ಬದಾ ನಿರ್ಮಿಸಲು ತಿಳಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಿದ್ದರಿಂದ ಕೂಲಿ ಕಾರ್ಮಿಕರು ವಲಸೆ ಹೋಗದಂತೆ ತಡೆದು ಜಿಲ್ಲೆಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರ ಹೆಚ್ಚು ಮಾನವ ದಿನಗಳ ಸೃಜನಯಾಗಿರುವುದಕ್ಕೆ ಅಧಿಕಾರಿಗಳನ್ನು ಅಭಿನಂದಿಸಿದ ಅವರು ನೆರೆಗಾ ಯೋಜನೆ ಅಡಿಯಲ್ಲಿ ಸಮುದಾಯ ಕಾಮಗಾರಿ ಶಾಲಾ ಕಾಂಪೌAಡ್ ಆಟದ ಮೈದಾನ ಶೌಚಾಲಯ ಕಾಮಗಾರಿ ಶೇಕಡ ೮೦% ಪೂರ್ಣಗೊಂಡಿರುವುದನ್ನು ತಿಳಿದು ಮಧುಗಿರಿ ಕ್ಷೇತ್ರ ನೆರಗ ಯೋಜನೆ ಅಡಿಯಲ್ಲಿ ಪ್ರಥಮ ಸ್ಥಾನ ಪಡೆಯಬೇಕಾಗಿದೆ ಇದಕ್ಕೆ ಅಧಿಕಾರಿಗಳು ಹೆಚ್ಚಿನ ಶ್ರಮವಹಿಸಬೇಕು ಎಂದರು.
ಮಧುಗಿರಿ ಕ್ಷೇತ್ರದಲ್ಲಿ ನರೇಗಾ ಯೋಜನೆ ಉತ್ತಮವಾಗಿ ನಡೆಯುತ್ತಿರುವುದಕ್ಕೆ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ವಿಭಾಗದ ಮಧುಸೂಧನ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಭಿನಂದಿಸಿದರು ಕೇಂದ್ರದಿAದ ಆಗಮಿಸಿದ್ದ ಗೃಹ ಮಂತ್ರಾಲಯ ಗ್ರಾಮೀಣಾಭಿವೃದ್ಧಿ ಮುಖ್ಯ ಹಣಕಾಸು ನಿಬಂಧಕ ಕುಂತಾಲ್ ಸೇಥ್ ಶರ್ಮಾ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಗಳನ್ನ ಹೊಸಕೆರೆ ಬಿಜವಾರ ಡಿ ವಿ ಹಳ್ಳಿ , ದಬ್ಬೇಗಟ್ಟ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿ ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಈ ಯೋಜನೆ ಅಡಿಯಲ್ಲಿ ಉತ್ತಮ ಕೆಲಸವಾಗಿದೆ ಇದೇ ಅಲ್ಲದೆ ಮಹಿಳಾ ಸಂಘಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ದಿಡ್ಡಿ ಮನೆ ಜಿಲ್ಲಾ ಪಂಚಾಯಿತಿ ಸಿಇಓ ಜಿ ಪ್ರಭು ಅಪಾರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್ ಸಹಾಯಕ ನಿರ್ದೇಶಕರು( ಗ್ರಾಮೀಣ ಉದ್ಯೋಗ) ಮಧುಸೂದನ್ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 1 times, 1 visits today)