ತುಮಕೂರು: ವಿದ್ಯುತ್ ಸ್ಪರ್ಶಿಸಿ ಗೆ ೯ ವರ್ಷದ ಬಾಲಕ ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋಮ ನಹಳ್ಳಿಯಲ್ಲಿ ನಡೆದಿದೆ.
ಮಹೇಶ್ ಎಂಬುವರ ಪುತ್ರ ಕುಶಾಲ್ (೯) ಮೃತ ಬಾಲಕನಾಗಿದ್ದಾನೆ. ಹಳೆಯ ತಂತಿಗಳನ್ನ ಬದಲಾಯಿಸದೆ ಇರುವುದೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಮಗ ನನ್ನು ಕಳೆದುಕೊಂಡ ತಂದೆ ತಾಯಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕನಾ ಯಕನಹಳ್ಳಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಶಾಸಕ ಸುರೇಶ್ ಬಾಬು ಭೇಟಿ ನೀಡಿ ಸಾಂತ್ವನ ಹೇಳಿದರು. ಸ್ಥಳದಲ್ಲೇ ಬೆಸ್ಕಾಂ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.
(Visited 1 times, 1 visits today)