ತುಮಕೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭಾವತಿಯನ್ನಾಗಿಸಿದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ ಪೋಕೋ ನ್ಯಾಯಾಲಯ ೪೦ ವರ್ಷಗಳ ಜೈಲು ಶಿಕ್ಷೆ ಹಾಗೂ ೨ ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಕುಮಾರ್ ಅಲಿಯಾಸ್ ಕುಮಾರಸ್ವಾಮಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು. ನೊಂದ ಬಾಲಕಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿದ್ದ ಈತ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ವಿಚಾರ ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಜನವರಿ ೩, ೨೦೨೩ರಂದು ಬಾಲಕಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂಬAಧ ದಾಖಲಾದ ದೂರಿನಂತೆ ಡಾ.ನವೀನ್ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿದ್ದು, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು.
ನ್ಯಾಯಾಲಯದ ವಿಚಾರಣೆಯಲ್ಲಿ ಅಭಿಯೋಜನೆಯ ಪರವಾಗಿ ಮಾಡಲಾದ ಸಾಕ್ಷಿಗಳು ಮತ್ತು ದಾಖಲೆಗಳಿಂದ ಕುಮಾರಸ್ವಾಮಿಯ ಮೇಲಿನ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಪರಾಧಿಗೆ ೪೦ ವರ್ಷಗಳ ಜೈಲು ಶಿಕ್ಷೆ ಮತ್ತು ೨ ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ ೧೦ ಲಕ್ಷ ರೂಪಾಯಿ ಹಾಗೂ ದಂಡದ ಮೊತ್ತದಲ್ಲಿ ೨ ಲಕ್ಷ ರೂ. ಸೇರಿದಂತೆ ಒಟ್ಟು ೧೨ ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ತುಮಕೂರು ಪೋಕ್ಸ್ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್.ವಾದ ಮಂಡಿಸಿದರು.

(Visited 1 times, 1 visits today)