ತುಮಕೂರು: ರೈತರು ತಮ್ಮ ರಾಸುಗಳಿಗೆ ತಪ್ಪದೇ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸಬೇಕೆಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಹೆಚ್.ಎ.ನಂಜೇಗೌಡ ಮನವಿ ಮಾಡಿದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ತುಮಕೂರು ಹಾಲು ಒಕ್ಕೂಟದ ಸಹಯೋಗದಲ್ಲಿ ತುಮಕೂರು ತಾಲ್ಲೂಕು ಕೆಸರಮಡು ಗ್ರಾಮದಲ್ಲಿ ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ೭ನೇ ಸುತ್ತಿನ ರಾಷ್ಟಿçÃಯ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ(ಎನ್.ಎ.ಡಿ.ಸಿ.ಪಿ.)ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಡಾ: ವೈ.ಜಿ.ಕಾಂತರಾಜು ಮಾತನಾಡಿ ಕಾಲುಬಾಯಿ ರೋಗದ ನಿರ್ಮೂಲನೆಯ ಮಹತ್ವವನ್ನು ತಿಳಿಸಿದರು. ರೋಗ ನಿರ್ಮೂಲನೆ ಮಾಡಲು ಲಸಿಕೆಯೊಂದೇ ಮಾರ್ಗವಾಗಿದ್ದು, ಎಲ್ಲಾ ರೈತರು ತಮ್ಮ ರಾಸುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ರೋಗ ನಿರ್ಮೂಲನೆ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ: ಜಿ.ಮಲ್ಲೇಶಪ್ಪ, ಡಾ: ಎಂ. ಸುರೇಶ್, ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ, ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ದಿಲೀಪ್, ಕೆಸರುಮಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಹೆಚ್.ಗಂಗಾಧರ್, ಕಾರ್ಯದರ್ಶಿ ರೇಣುಕಾರಾದ್ಯ, ಹಿರಿಯ ಪಶುವೈದ್ಯಕೀಯ ಪರೀಕ್ಷಕ ಮಹದೇವಯ್ಯ ಉಪಸ್ಥಿತರಿದ್ದರು.
(Visited 1 times, 1 visits today)