ತುಮಕೂರು: ವಿಶ್ವದಲ್ಲಿ ಪಶು ವೈದ್ಯಕೀಯ ಕ್ಷೇತ್ರವು ವೈದ್ಯಕೀಯ ಕ್ಷೇತ್ರಕ್ಕೆ ಸರಿಸಮನಾಗಿ ಬೆಳೆದಿದೆ ಎಂದು ಕರ್ನಾಟಕ ಪಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ವೈ.ಜಿ. ಕಾಂತರಾಜು ಅಭಿಪ್ರಾಯಪಟ್ಟರು.
ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸಂಘದ ಸಹಯೋಗದಲ್ಲಿ ನಗರದಲ್ಲಿ ಏ. ೨೬ರಂದು ಹಮ್ಮಿಕೊಂಡಿದ್ದ ವಿಶ್ವ ಪಶುವೈದ್ಯಕೀಯ ದಿನಾಚರಣೆ ಮತ್ತು ತಾಂತ್ರಿಕ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಶು ವೈದ್ಯಕೀಯ ವೃತ್ತಿ ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಅಮೋಘವಾದ ಸಂಶೋಧನೆಗಳ ಮೂಲಕ ಉತ್ತಮ ರಾಸುಗಳ ತಳಿಗಳನ್ನು ಅಭಿವೃದ್ಧಿಗೊಳಿಸಿದೆ. ನಾಗಾಲೋಟದಲ್ಲಿ ಬೆಳೆದಿರುವ ಮಾನವ ಸಂಕುಲಕ್ಕೆ ಸಾಕಾಗುವಷ್ಟು ಪ್ರಾಣಿಜನ್ಯ ಪೋಷಕಾಂಶಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ. ಇದರ ಜೊತೆಗೆ ಪ್ರಾಣಿಜನ್ಯ ರೋಗಗಳನ್ನು ಪತ್ತ ಹಚ್ಚಿ ತಡೆಗಟ್ಟುವ ಮೂಲಕ ಸಾರ್ವಜನಿಕ ಆರೋಗ್ಯ ರಕ್ಷಣೆ ಹಾಗೂ ವಿಶ್ವದ ಆರ್ಥಿಕ ಅಭಿವೃದ್ಧಿಗೆ ಕೊಡುಗೆಯನ್ನು ನೀಡುತ್ತಿದೆ ಎಂದು ತಿಳಿಸಿದರು.
ಒನ್ ಹೆಲ್ತ್ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಪಶುವೈದ್ಯಕೀಯ ಕ್ಷೇತ್ರ ಮಹತ್ತರವಾದ ಪಾತ್ರವಹಿಸಿದೆ. ಪಶುವೈದ್ಯಕೀಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಮಹನೀಯರನ್ನು ಹಾಗೂ ಅವರ ಕೊಡುಗೆಗಳನ್ನು ಸ್ಮರಿಸಿಕೊಂಡು ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವವರನ್ನು ಗೌರವಿಸುವ ಉದ್ದೇಶದಿಂದ ವಿಶ್ವ ಪಶುವೈದ್ಯಕೀಯ ಸಂಘವು ೨೦೦೦ನೇ ಏಪ್ರಿಲ್ ೨೯ರಂದು ಪ್ರ ಥಮ ವಿಶ್ವ ಪಶುವೈದ್ಯಕೀಯ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿದೆ. ಅಂದಿನಿAದ ಪ್ರತಿವರ್ಷ ಏಪ್ರಿಲ್ ತಿಂಗಳ ಕಡೆಯ ಶನಿವಾರದಂದು ವಿಶ್ವ ಪಶುವೈದ್ಯಕೀಯ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ: ಜಿ. ಗಿರೀಶ್ ಬಾಬು ರೆಡ್ಡಿ ಮಾತನಾಡಿ, ಪಶು ವೈದ್ಯಕೀಯ ವೃತ್ತಿಯ ಪ್ರಾಮುಖ್ಯತೆ ಮತ್ತು ಮಹತ್ವವನ್ನು ತಿಳಿಸಿದರಲ್ಲದೆ, ಪಶುವೈದ್ಯರು ಸಮಾಜಮುಖಿಯಾಗಿ ಕೆಲಸ ಮಾಡಬೇಕೆಂದು ಹೇಳಿದರು.
ಡಾ ಯಮುನ ಬಿ.ಎನ್. ಅವರು “ಸಮುದಾಯ ಆರೋಗ್ಯ ಮತ್ತು ಒತ್ತಡ ನಿರ್ವಹಣೆ” ಹಾಗೂ ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಸತೀಶ್ ಜಿ.ಎಂ. ಅವರು ಈ ವರ್ಷದ ಪಶುವೈದ್ಯಕೀಯ ದಿನಾಚರಣೆಯ ಘೋಷವಾಕ್ಯವಾದ “ಅನಿಮಲ್ ಹೆಲ್ತ್ ಟೇಕ್ಸ್ ಎ ಟೀಮ್” ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಪಶುವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಡಾ. ರುದ್ರಪ್ರಸಾದ್, ಡಾ. ಪಿ.ಪಿ. ಲೋಕೇಶ್, ಡಾ. ಜಯಂತಿ, ಡಾ. ಶಿವಮೂರ್ತಿ ಹಾಗೂ ಡಾ. ಹೆಚ್.ಟಿ. ಮಂಜುನಾಥ್ ಅವರಿಗೆ ಶ್ರೇಷ್ಠ ಪಶುವೈದ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳಾದ ಡಾ. ಪುರುಷೋತ್ತಮ್, ಡಾ. ಮಂಜುನಾಥ್, ಡಾ. ಶಶಿಕಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)