ಬೆಂಗಳೂರು:

      ಸ್ಯಾಂಡಲ್‍ವುಡ್‍ನ ಖ್ಯಾತ ಹಿರಿಯ ನಟ ಲೋಕನಾಥ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. 

      ಲೋಕನಾಥ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ನಟನಾಗಿ ನಟಿಸಿದ್ದು, 5 ದಶಕಗಳ ಕಾಲ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಲೋಕನಾಥ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

      ಮಧ್ಯಾಹ್ನ 12 ರಿಂದ 2.30ರವರೆಗೂ ಅಂತಿಮ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಬಳಿಕ ಸಂಜೆ 4 ಗಂಟೆಗೆ ಬನಶಂಕರಿಯಲ್ಲಿರುವ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಓರ್ವ ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

      ದೇವಾಂಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದ್ದು, ಪುತ್ರ ಅಶ್ವಿನ್ ಶ್ಯಾಂಡಿಲ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಸಂಜೆ 4 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ. ಬನಶಂಕರಿ ಎಕ್ಸೆಲ್ ಕೇರ್ ಆಸ್ಪತ್ರೆಯಲ್ಲಿ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ರಾತ್ರಿ ಸುಮಾರು 12.10ಕ್ಕೆ ಕೊನೆ ಉಸಿರೆಳೆದಿದ್ದರು.

(Visited 391 times, 1 visits today)