ಬೆಂಗಳೂರು:
ಎಚ್.ಡಿ.ರೇವಣ್ಣ ಸೂಪರ್ ಸಿಎಂ ಅಲ್ಲ, ಅವರು ಕೇವಲ ಸಚಿವರಷ್ಟೇ. ಕಾಂಗ್ರೆಸ್‌ನವರು ಒತ್ತಡ ಹಾಕಲು ಮುಂದಾದರೆ ನಮ್ಮ ದಾರಿ ನಮಗೆ ಎಂದು ಅನವಶ್ಯಕವಾಗಿ ಹೇಳಿಕೆ ನೀಡಿದ್ದಾರೆ ಎಂದು ರೇವಣ್ಣ ಹೇಳಿಕೆಗೆ ಮಾಜಿ ಸಚಿವ ಎಚ್.ಎಂ ರೇವಣ್ಣ ತಿ ರುಗೇಟು ನೀಡಿದ್ದಾರೆ.
ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್‌ಡಿ ರೇವಣ್ಣ ಏನೂಸೂಪರ್ ಸಿಎಂ ಅಲ್ಲ ಪರಿಸ್ಥಿತಿ ಮತ್ತು ಮಿತಿಯನ್ನು ಅರಿತು ಮಾತನಾಡಬೇಕು. ಹೈಕಮಾಂಡ್ ನಿರ್ದೇಶನದ ಮೇರೆಗೆ ಕೋಮುವಾದಿ ಪಕ್ಷ ದೂರವಿಡಲು ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ಆದರೆ ಪಕ್ಷದಲ್ಲಿ ಇದೀಗ ಎಲ್ಲರೂ ಮಾತನಾಡಲು ಆರಂಭಿಸಿದ್ದಾರೆ ಎಂದು ದೂರಿದರು.
ಕೋಮುವಾದಿ ಬಿಜೆಪಿಯನ್ನು ದೂರ ಇಡಲು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಜೆಡಿಎಸ್ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇಂದು ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಬರುತ್ತಾರೆ. ಅವರೊಂದಿಗೆ ಚರ್ಚೆ ಮಾಡಿ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.