ತುಮಕೂರು:

      ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಜ.22) ತುಮಕೂರಿಗೆ ಆಗಮಿಸುತ್ತಿದ್ದಾರೆ.

     ನಾಳಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಅವರು, ಮಠಕ್ಕೆ ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

     ಇಂದು ಸಂಜೆ ವೇಳೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರೂ ಮಠಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

(Visited 16 times, 1 visits today)