ನವದೆಹಲಿ:
ಭಾರತದ ಕುಖ್ಯಾತ ಭೂಗತಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಬಂಧನಗಲ್ ದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಫ್ತಾ ವಸೂಲಿ, ಕೊಲೆ ಬೆದರಿಕೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಸಿಸಿಬಿಯ ಹಿಟ್ ಲಿಸ್ಟ್ ನಲ್ಲಿ ಅಗ್ರ ಸಾಲಿನಲ್ಲಿದ್ದನೆನ್ನಲಾಗಿದೆ. ರಿಮೋಟ್ ರೌಡಿಸಂ ನಡೆಸಿದ ಮೊದಲ ಭೂಗತ ಪಾತಕಿ ಎಂಬ ಕುಖ್ಯಾತಿಯೂ ರವಿ ಪೂಜಾರಿಗಿದೆ. ಇಂಟರ್ ಪೋಲ್ ನಿಂದಲೂ ಪೂಜಾರಿ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ನೀಡಲಾಗಿತ್ತು.
ಕರ್ನಾಟಕ, ಮಹಾರಾಷ್ಟ್ರ ರಾಜ್ಯದ ಹಲವೆಡೆ ರವಿ ಪೂಜಾರಿ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕೆಲ ದಿನಗಳ ಹಿಂದಷ್ಟೇ ಮುಂಬೈ ಪೊಲೀಸರು ರವಿ ಪೂಜಾರಿ ಗ್ಯಾಂಗ್ನ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದರು. ಈ ಬಂಧಿತರಲ್ಲಿ ಬೆಂಗಳೂರಿನ ಆಕಾಶ್ ಶೆಟ್ಟಿ ಕೂಡ ಒಬ್ಬ. ಭೂಗತ ಪಾತಕಿಯು ಬ್ಯುಲ್ಡರ್ವೊಬ್ಬರಿಗೆ ಫೋನ್ನಲ್ಲಿ ಬೆದರಿಕೆ ಹಾಕಿದ್ದನೆನ್ನಲಾಗಿದೆ. ರವಿ ಪೂಜಾರಿಗೆ ನಗರದಲ್ಲಿರುವ ಬ್ಯುಲ್ಡರ್ಗಳ ಬಗ್ಗೆ ಮಾಹಿತಿ ಕೊಡುತ್ತಿದ್ದುದು ಆಕಾಶ್ ಶೆಟ್ಟಿ ಮತ್ತು ವಿಲಿಯಮ್ ರಾಡ್ರಿಕ್ಸ್. ಇದೇ ಕಾರಣಕ್ಕೆ ಪೊಲೀಸರು ಇವರಿಬ್ಬರನ್ನು ಬಂಧಿಸಿ ಎಂಕೋಕಾ ಕಾಯ್ದೆಯಡಿ ಮೊಕದ್ದಮೆ ಹಾಕಿದ್ದರು.
ಇದೀಗ ಸ್ವತಃ ಅಂಡರ್ವರ್ಲ್ಡ್ ಡಾನ್ ರವಿ ಪೂಜಾರಿಯೇ ಬಂಧಿತನಾಗಿದ್ಧಾನೆ. 90ರ ದಶಕದಲ್ಲಿ ಭೂಗತಲೋಕದಲ್ಲಿ ದೊಡ್ಡಮಟ್ಟದಲ್ಲಿ ಹೆಸರು ಮಾಡಿದ್ದ ರವಿ ಪೂಜಾರಿ ದುಬೈನಲ್ಲಿ ಕೂತೇ ಮುಂಬೈ, ಮಂಗಳೂರು ಮತ್ತು ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದನೆನ್ನಲಾಗಿದೆ.
(Visited 73 times, 1 visits today)