ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾರೆಂಬುದರ ಕುರಿತು ಖಚಿತ ಮಾಹಿತಿ ಪಡೆದ ಪಾಲಿಕೆ ಅಧಿಕಾರಿಗಳು ರಾತ್ರೋ ರಾತ್ರಿ ಕಾರ್ಯಾಚರಣೆಗಿಳಿದಿದ್ದು, ಕಮೀಷನರ್ ನೇತೃತ್ವದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಸಿಬ್ಬಂದಿ ದಾಳಿ ನಡೆಸಿದ್ದರು. ದಾಳಿ ವೇಳೆ ಎಸ್.ಆರ್ ಬಾರ್ ಮಾಲೀಕ ಹಾಗೂ ಕಮೀಷನರ್ ನಡುವೆ ಮಾತಿನ ಚಕಮಕಿ ನಡೆದಿದೆ. ಬಾರ್ ಬಾಗಿಲು ಹಾಕುವಂತೆ ಕಮೀಷನರ್ ಸೂಚಿಸಿದ್ದಾರೆ. ಇದಕ್ಕೆ ಕೋಪಗೊಂಡ ಮಾಲೀಕ ಪ್ರತಿರೋಧ ವ್ಯಕ್ತಪಡಿಸಿದ್ದಾನೆ.
ಬಾರ್ ಮಾಲೀಕನಿಂದ 10 ಸಾವಿರ ದಂಡ ವಸೂಲಿ ಮಾಡಲಾಗಿದ್ದು, ನಗರದ ಇತರೆ ಬಾರ್ಗಳಿಂದ 30 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ.
(Visited 66 times, 1 visits today)