ತುಮಕೂರು:
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ದೃಷ್ಟಿಯಿಂದ ಸರ್ಕಾರವು ಸ್ತ್ರೀಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸದ ಎಸ್.ಪಿ ಮುದ್ದಹನುಮೇಗೌಡ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಸಹಯೋಗದಲ್ಲಿಂದು ನಗರದ ಬಾಲಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ “ಸ್ತ್ರೀ ಶಕ್ತಿ ಸಮಾವೇಶ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ತ್ರೀಶಕ್ತಿ ಗುಂಪುಗಳು ಮಹಿಳೆಯರಿಗೆ ಹೊಸ ಚೈತನ್ಯ ನೀಡಿ ಆರ್ಥಿಕ, ಸಾಮಾಜಿಕ ಸದೃಢತೆಯನ್ನು ತಂದುಕೊಟ್ಟಿದೆ. ಸ್ತ್ರೀಶಕ್ತಿ ಸಂಘಗಳು ಅನೇಕ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 10937 ಸ್ತ್ರೀಶಕ್ತಿ ಗುಂಪುಗಳು ರಚನೆಯಾಗಿದ್ದು, 1.20 ಲಕ್ಷಕ್ಕೂ ಹೆಚ್ಚು ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುವುದರ ಜೊತೆಗೆ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವಲ್ಲಿ ತಮ್ಮ ಬೆಂಬಲವಿದೆ. ಇಂದಿನ ಮಹಿಳೆಯರು ಪೈಲೆಟ್, ಪೊಲೀಸ್, ಐಎಎಸ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪುರುಷರಿಗೆ ಸಮಾನರಾಗಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಶಾಸಕ ಜಿ.ಬಿ ಜ್ಯೋತಿಗಣೇಶ್ ಮಾತನಾಡಿ ಸರ್ಕಾರವು ಮಹಿಳೆಯರಿಗಾಗಿ ನೀಡುತ್ತಿರುವ ವಿಶೇಷ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಮಾತನಾಡಿ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವುದಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪ್ರೇಮ್‍ಕುಮಾರ್ ಮಾತನಾಡಿ ಮಹಿಳೆಯನ್ನು ಗೌರವಸಿದರೆ ದೇವರಿಗೆ ಪೂಜೆ ಮಾಡಿದಂತೆ ಎಂಬ ಮಾತಿನಂತೆ ಸಮಾಜದಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನವನ್ನು ನೀಡಿದ್ದೇವೆ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕಾಮಾಕ್ಷಿ ಮಾತನಾಡಿ ಹೆಣ್ಣೊಂದು ಕಲಿತರೆ-ಶಾಲೆಯೊಂದು ತೆರೆದಂತೆ ಎಂಬಂತೆ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರೆ ಸಮಾಜದ ಅನೇಕ ಸಮಸ್ಯೆಗಳು ಬಗೆಹರಿಯುತ್ತವೆ. ಗಂಡು-ಹೆಣ್ಣು ಎಂಬ ಬೇಧವಿಲ್ಲದೇ ಪತ್ರಿಯೊಬ್ಬರಿಗೂ ಶಿಕ್ಷಣ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತೆ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಶಿರಾ ತಾಲೂಕಿನ ಮಾದುಗೆರೆ ಗ್ರಾಮದ ಮಹದೇವಮ್ಮ ಅವರನ್ನು ಸನ್ಮಾನಿಸಲಾಯಿತು. ಅತ್ಯುತ್ತಮ ಸೇವೆ