ಮಧುಗಿರಿ:
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಈ ಬಾರಿ ಪ್ರಧಾನಿಯಾಗುವುದು ಖಚಿತ ಎಂದು ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದರು.
ಪಟ್ಟಣದ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತುಂಬಾ ಆಶಾಭಾವನೆಯನ್ನು ಹೊಂದಿರುವ ಭಾರತೀಯ ಜನತಾ ಪಕ್ಷಕ್ಕೆ ಈ ಬಾರಿ ರಾಜ್ಯದಲ್ಲಿ ಮತ್ತು ದೇಶದಲ್ಲಿ ನಿರಾಶೆ ಕಾದಿದೆ ಎಂದು ತಿಳಿಸಿದರು.
ಈ ಬಾರಿಯ ತುಮಕೂರು ಲೋಕಸಭಾ ಚುನಾವಣೆಯಲ್ಲಿ ನಮ್ಮ ಮೈತ್ರಿ ಪಕ್ಷದ ಅಭ್ಯರ್ಥಿ ಎಚ್ ಡಿ ದೇವೇಗೌಡರು ಪ್ರಚಂಡ ಬಹುಮತಗಳಿಂದ ಗೆಲ್ಲುವುದಾಗಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ .
ಮಾಜಿ ಶಾಸಕ ಕೆ.ಎನ್.ರಾಜಣ್ಣನವರ ಬಗ್ಗೆ ಅಸಮಾಧಾನವಿಲ್ಲ ನಮಗೆ ಈ ಬಾರಿ ಅವರ ಸಹಕಾರ ಹೆಚ್ಚಾಗಿದೆ, ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ಹಾಗೂ ಕೆ.ಎನ್.ರಾಜಣ್ಣ ಭೇಟಿ ಉಭಯ ಕುಶಲೋಪರಿ ಅನಿಸುತ್ತೆ, ಮದುವೆ, ಹುಟ್ಟಿದ ಹಬ್ಬ ಹಾಗೂ ಇತರೆ ವಿಶೇಷ ಸಂದರ್ಭದಲ್ಲಿ ಎಲ್ಲರೂ ಒಟ್ಟಿಗೆ ಸೇರುತ್ತೇವೆ ಇಂತಹ ಭೇಟಿಯಲ್ಲಿ ಯಾವುದೇ ರಾಜಕೀಯ ವಿರುವುದಿಲ್ಲ ವೆಂದರು.ಇದೇ ಸಂದರ್ಭದಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ, ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರಹಾಲಪ್ಪ, ಗುತ್ತಿಗೆದಾರ ರಾಧೇಶ್ಯಾಂ, ಕೊಂಡವಾಡಿ ಚಂದ್ರಶೇಖರ್, ಎಂ.ಆರ್.ಜಗನ್ನಾಥ್, ,ಮಹಮದ್ ಅಯ್ಯೂಬ್ ಹಾಗೂ ಇತರ ಉಭಯ ಪಕ್ಷಗಳ ಮುಖಂಡರು ಹಾಜರಿದ್ದರರು.