ತುಮಕೂರು:

      ಜಿಲ್ಲಾದ್ಯಂತ ಜೂನ್ 11 ರಿಂದ 20ರವರೆಗೆ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ನಿಷೇಧಾಜ್ಞೆ ಹೊರಡಿಸಿದ್ದಾರೆ.

      ಪರೀಕ್ಷೆಯನ್ನು ಸುಸೂತ್ರವಾಗಿ ಲೋಪದೋಷವಿಲ್ಲದಂತೆ ನಡೆಸಲು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚುವುದು. ಅನಧಿಕೃತ ವ್ಯಕ್ತಿಗಳು ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವ ಅನಧಿಕೃತ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಿದೆ ಎಂದು ಅವರು ತಿಳಿಸಿದ್ದಾರೆ.

(Visited 9 times, 1 visits today)