ತುಮಕೂರು:

      ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದಿನಿಂದ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ಕಾನೂನು ಅರಿವು-ನೆರವು ಸಾಕ್ಷರತಾ ರಥ ಯಾತ್ರೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಂತುಮಕೂರು:

      ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದಿನಿಂದ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ಕಾನೂನು ಅರಿವು-ನೆರವು ಸಾಕ್ಷರತಾ ರಥ ಯಾತ್ರೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಂದ್ರ ಬಾದಾಮಿಕರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

      ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿ ಮಾತನಾಡಿದ ನ್ಯಾ. ರಾಜೇಂದ್ರ ಬಾದಾಮಿಕರ್ ಅವರು, ಪ್ರತಿಯೊಬ್ಬರ ಮನೆ ಬಾಗಿಲಿಗೆ ಕಾನೂನು ಹೋಗಬೇಕು ಎಂಬ ಸದುದ್ದೇಶದಿಂದ ಈ ಕಾನೂನು ಸಾಕ್ಷರತಾ ರಥ ಯಾತ್ರೆಯನ್ನು ಆಯೋಜಿಸಲಾಗಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಈ ರಥಯಾತ್ರೆ ತುಮಕೂರು ತಾಲ್ಲೂಕಿನಲ್ಲಿ ಸಂಚರಿಸಲಿದೆ ಎಂದರು.

      ಪ್ರತಿ ತಾಲ್ಲೂಕಿನಲ್ಲಿ 4 ದಿನಗಳಂತೆ ಈ ರಥಯಾತ್ರೆ ನಡೆಯಲಿದ್ದು, ನಂತರ ಬೇರೆ ಜಿಲ್ಲೆಗಳಿಗೆ ತೆರಳಲಿದೆ ಎಂದು ಅವರು ಹೇಳಿದರು.
ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಯಾರೂ ಸಹ ಕಾನೂನಿನ ಅರಿವಿಲ್ಲದೆ ಅವಕಾಶಗಳಿಂದ ವಂಚಿತವಾಗಬಾರದು. ಹಾಗಾಗಿ ಈ ಕಾನೂನು ಸಾಕ್ಷರತಾ ರಥ ನಡೆಯುತ್ತಿದ್ದು, ಪ್ರತಿಯೊಬ್ಬರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

      ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಕೆ. ಅನಿಲ್ ಮಾತನಾಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿರುವ ಈ ಕಾನೂನು ಅರಿವು-ನೆರವು ರಥ ಯಾತ್ರೆಯ ಪ್ರಯೋಜನಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು. ಈ ಕಾನೂನು ಸಾಕ್ಷರತಾ ರಥಯಾತ್ರೆಯು ಬೆಳ್ಳಾವಿ ಗ್ರಾ.ಪಂ., ಬುಗುಡನಹಳ್ಳಿ, ಕೋರಾ, ಕೆಸ್ತೂರು, ದೇವಲಾಪುರ, ಗೂಳೂರು, ಹೆತ್ತೇನಹಳ್ಳಿ, ಪಾಲಸಂದ್ರ, ಹೆಬ್ಬೂರು, ವನಸಿಗೆರೆ ಹಾಗೂ ನಾಗವಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸಂಚರಿಸಲಿದೆ.

       ಈ ಸಂದರ್ಭದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ನ್ಯಾ. ದಶರಥ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ದೇವರಾಜು ಮತ್ತಿತರರು ಉಪಸ್ಥಿತರಿದ್ದರು.ದ್ರ ಬಾದಾಮಿಕರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

      ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಿ ಮಾತನಾಡಿದ ನ್ಯಾ. ರಾಜೇಂದ್ರ ಬಾದಾಮಿಕರ್ ಅವರು, ಪ್ರತಿಯೊಬ್ಬರ ಮನೆ ಬಾಗಿಲಿಗೆ ಕಾನೂನು ಹೋಗಬೇಕು ಎಂಬ ಸದುದ್ದೇಶದಿಂದ ಈ ಕಾನೂನು ಸಾಕ್ಷರತಾ ರಥ ಯಾತ್ರೆಯನ್ನು ಆಯೋಜಿಸಲಾಗಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಈ ರಥಯಾತ್ರೆ ತುಮಕೂರು ತಾಲ್ಲೂಕಿನಲ್ಲಿ ಸಂಚರಿಸಲಿದೆ ಎಂದರು.

      ಪ್ರತಿ ತಾಲ್ಲೂಕಿನಲ್ಲಿ 4 ದಿನಗಳಂತೆ ಈ ರಥಯಾತ್ರೆ ನಡೆಯಲಿದ್ದು, ನಂತರ ಬೇರೆ ಜಿಲ್ಲೆಗಳಿಗೆ ತೆರಳಲಿದೆ ಎಂದು ಅವರು ಹೇಳಿದರು.
ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಯಾರೂ ಸಹ ಕಾನೂನಿನ ಅರಿವಿಲ್ಲದೆ ಅವಕಾಶಗಳಿಂದ ವಂಚಿತವಾಗಬಾರದು. ಹಾಗಾಗಿ ಈ ಕಾನೂನು ಸಾಕ್ಷರತಾ ರಥ ನಡೆಯುತ್ತಿದ್ದು, ಪ್ರತಿಯೊಬ್ಬರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

      ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜೆ.ಕೆ. ಅನಿಲ್ ಮಾತನಾಡಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿರುವ ಈ ಕಾನೂನು ಅರಿವು-ನೆರವು ರಥ ಯಾತ್ರೆಯ ಪ್ರಯೋಜನಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು. ಈ ಕಾನೂನು ಸಾಕ್ಷರತಾ ರಥಯಾತ್ರೆಯು ಬೆಳ್ಳಾವಿ ಗ್ರಾ.ಪಂ., ಬುಗುಡನಹಳ್ಳಿ, ಕೋರಾ, ಕೆಸ್ತೂರು, ದೇವಲಾಪುರ, ಗೂಳೂರು, ಹೆತ್ತೇನಹಳ್ಳಿ, ಪಾಲಸಂದ್ರ, ಹೆಬ್ಬೂರು, ವನಸಿಗೆರೆ ಹಾಗೂ ನಾಗವಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಸಂಚರಿಸಲಿದೆ.

       ಈ ಸಂದರ್ಭದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ನ್ಯಾ. ದಶರಥ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ದೇವರಾಜು ಮತ್ತಿತರರು ಉಪಸ್ಥಿತರಿದ್ದರು.

(Visited 32 times, 1 visits today)