ಬೆಂಗಳೂರು:

      ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

      ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಸ್.ಯಡಿಯೂರಪ್ಪ ಹಸಿರು ಶಾಲು ಹೊದ್ದು, ಗೋಧೋಳಿ ಲಗ್ನದಲ್ಲಿ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜುಬಾಯಿ ವಾಲ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಪ್ರತಿಜ್ಞಾವಿಧಿಯನ್ನು ಭೋದಿಸಿದರು.

       ಕಾರ್ಯಕ್ರಮದಲ್ಲಿ ರಾಜ್ಯದ ಬಿಜೆಪಿ ನಾಯಕರು ಸೇರಿದಂತೆ ಪಕ್ಷದ ಅನೇಕರು ಪಾಲ್ಗೊಂಡು ಯಡಿಯೂರಪ್ಪ ಅವರಿಗೆ ಶುಭಕೋರಿದರು.

      ಪದಗ್ರಹಣ ಸಮಾರಂಭ ಹಿನ್ನೆಲೆಯಲ್ಲಿ ರಾಜಭವನದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಖಾಕಿಪಡೆ ಭದ್ರತೆ ಕೈಗೊಂಡಿದೆ. ಇನ್ನು ರಾಜಭವನ ಮಾರ್ಗವಾಗಿ ತೆರಳುವ ವಾಹನಗಳಿಗೆ ಬದಲು ಮಾರ್ಗ ವ್ಯವಸ್ಥೆ ಕಲ್ಪಿಸಲಾಗಿದೆ.

(Visited 9 times, 1 visits today)