ತುಮಕೂರು:
ಅಂಗನವಾಡಿ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ಇಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶುಭ ಕಲ್ಯಾಣ್ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು.
ಕುಣಿಗಲ್ ತಾಲ್ಲೂಕಿನ ಮಡಿಕೆಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಅವರು ಗುರುವಾರ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರಲ್ಲದೇ ಅಲ್ಲಿನ ಸ್ವಚ್ಚತೆ, ಮಕ್ಕಳ ಶುಚಿತ್ವ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸುವುದರೊಂದಿಗೆ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಹಾರ ಪೂರೈಕೆ ಮಾಡಲು ಸೂಚನೆ ನೀಡಿದರು.
ನಂತರ ಜಾಣಗರ ಹಾಗೂ ಕಳಸಿಪಾಳ್ಯ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೂ ಭೇಟಿ ನೀಡಿದರಲ್ಲದೇ ಸದರಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ, ನರೇಗಾ ಯೋಜನೆ ಪ್ರಗತಿ ಕುರಿತಂತೆ ಪಂಚಾಯಿತಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಿದರು.
(Visited 47 times, 1 visits today)