ತುಮಕೂರು:

      ಅಕ್ಷರ ದಾಸೋಹದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ತನಿಖೆ ಕೈಗೊಳ್ಳಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಾ ಅಕ್ಷರ ದಾಸೋಹದ ಅವ್ಯವಹಾರದ ತನಿಖೆಗಾಗಿ ತಂಡ ರಚಿಸಿದ್ದು, ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ ತುಮಕೂರು ಮತ್ತು ಮಧುಗಿರಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ವಿವಿಧ ಕಾಮಗಾರಿಗಳ 1.93 ಕೋಟಿ ರೂಪಾಯಿಗಳ ಹಣದ ಬಿಲ್ ರದ್ದಾಗಿರುವ ಕುರಿತು ಅಧ್ಯಕ್ಷರ ಗಮನಕ್ಕೆ ತರಲಾಯಿತು.

      ಬಿಲ್ ರದ್ದಾಗಿರುವ ಕುರಿತು ಮಾಹಿತಿ ಪಡೆದ ಸಿಇಒ ಅವರು ಬಿಲ್‍ಗಳನ್ನು ಸೂಕ್ತ ದಿನಾಂಕದೊಳಗೆ ಪಾವತಿಸಿರುವ ಬಗ್ಗೆ ಖಾತರಿ ಪಡಿಸಿಕೊಂಡು ಬಿಲ್ ರದ್ದಾಗಿರುವ ಬಗ್ಗೆ ಪರಿಶೀಲನೆ ನಡೆಸಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಪಶುಭಾಗ್ಯ ಯೋಜನೆ ಮತ್ತು ಅಮೃತ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಕೂಡಲೇ ತಲುಪಿಸುವಂತೆ ಸಿಇಓ ತಿಳಿಸಿದರು.ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯಿತಿ ಅಧ್ಯಕ್ಷರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

 

(Visited 13 times, 1 visits today)