ತುಮಕೂರು :
ಜಿಲ್ಲೆಯ ಪಾವಗಡ ತಾಲೂಕು ಕೋಮಾರ್ಲಹಳ್ಳಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನಾಗೇಂದ್ರಪ್ಪ ಟಿ.ಎಸ್. ಎಂಬ ಸಹ ಶಿಕ್ಷಕ ಅವರು ಆಗಸ್ಟ್ 7ರಂದು ಮದ್ಯಪಾನ ಮಾಡಿ ಶಾಲೆಗೆ ಹಾಜರಾಗಿ ಶಾಲಾ ಶೈಕ್ಷಣಿಕ ವಾತಾವರಣ ಕಲುಷಿತಗೊಳಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತಗೊಳ್ಳಲು ಕಾರಣರಾಗಿರುತ್ತಾರೆ.
ಇವರು ಕರ್ತವ್ಯ ಲೋಪ ಎಸಗಿರುವುದರಿಂದ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) 1957ರ ನಿಯಮ 10ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಶಿಸ್ತು ಕ್ರಮ ಕೈಗೊಂಡು ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಆಡಳಿತ) ರವಿಶಂಕರ ರೆಡ್ಡಿ ತಿಳಿಸಿದ್ದಾರೆ.
(Visited 9 times, 1 visits today)