ತುಮಕೂರು:
ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ತುಮಕೂರು ಮಹಾನಗರ ಪಾಲಿಕೆಗೆ ಮಹಾ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕೋಟಿ ಕೋಟಿ ರೂ ತೆರಿಗೆ ಕಟ್ಟದೆ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ವಂಚನೆ ಮಾಡಿದೆ ಎಂಬುದು ಐಟಿ ದಾಳಿ ವೇಳೆ ಬೆಳಕಿಗೆ ಬಂದಿದೆ.
ತುಮಕೂರು ಮಹಾನಗರ ಪಾಲಿಕೆಗೆ ತೆರಿಗೆ ಕಟ್ಟದೆ 2002 ರಿಂದಲೂ ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ವಂಚನೆ ಮಾಡಿದೆ. ಎಂಜಿನಿಯರಿಂಗ್ ಕಾಲೇಜು ಆರಂಭವಾದಾಗಿಂದ ಒಮ್ಮೆಯೂ ತೆರಿಗೆ ಕಟ್ಟಿಲ್ಲ ಎನ್ನಲಾಗಿದೆ. ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಪಾಲಿಕೆಗೆ ಸರಿಸುಮಾರು 2 ಕೋಟಿ ರೂ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂಬುದು ಐಟಿ ದಾಳಿ ವೇಳೆ ಬೆಳಕಿಗೆ ಬಂದಿದೆ.
ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಶಿಕ್ಷಣ ಸಂಸ್ಥೆ 1,83,20,439 ರೂ. ಬಾಕಿ ಇರಿಸಿಕೊಂಡಿದೆ. ಈ ಸಂಬಂಧ ತುಮಕೂರು ಮಹಾನಗರ ಪಾಲಿಕೆ ನೀಡಿದ್ದ ನೋಟಿಸ್ ಐಟಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಇನ್ನೊಂದೆಡೆ, ಅಳತೆ ಮಾಡಲೂ ಒಪ್ಪದ ಎಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಸರಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.