ತುಮಕೂರು:
ಉಪಗ್ರಹ ಆಧಾರಿತ ತರಬೇತಿಯಿಂದ ಜನಪ್ರತಿನಿಧಿಗಳ ಸಾಮಾರ್ಥ್ಯಾಭಿವೃದ್ಧಿ ಸಾಧ್ಯವಿಲ್ಲ ಮುಖಾಮುಖಿ ತರಬೇತಿಯ ವಾತಾವರಣ ಸೃಷ್ಠಿಯಾಗಬೇಕು ಎಂದು ಶಾಸಕರಾದ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಅವರು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡುತ್ತಾ, ನಾನು ವಿಕೇಂದ್ರಿಕರಣದ ಪ್ರತಿಪಾದಕ, ನಾಣು ಕೆ.ಎಂ.ಎಫ್.ಅಧ್ಯಕ್ಷನಾಗಿದ್ದ ಕಾಲದಲ್ಲಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಅಧಿಕಾರ ವಿಕೇಂದ್ರಿಕರಣಕ್ಕೆ ಬಾರೀ ವಿರೋಧದ ನಡುವೆಯೆ ಜಾರಿ ಮಾಡಿದ್ದೆ. ಹಾಗೆಯೇ ಪಂಚಾಯತ್ ರಾಜ್ ವ್ಯವಸ್ಥೇ ಅಧಿಕಾರ ವಿಕೇಂದ್ರಿಕರಣದಿಂದ ಅಭಿವೃದ್ಧಿ ಸಾಧ್ಯ ಆದರೆ ತರಬೇತಿ ಸಂಸ್ಥೆ ಗುಣಾತ್ಮಕ ತರಬೇತಿ ಕಡೆ ಗಮನ ಹರಿಸಬೇಕಾಗಿದೆ ಎಂದರು.
ಆದರೆ ತರಬೇತಿ ಸಂಸ್ಥೆಗೆ ಅದಿಕಾರ ವಿಕೇಂದ್ರಿಕರಣದ ಪರವಾಗಿ ಇರುವ ಕ್ರಿಯಾ ಶೀಲ ಅಧಿಕಾರ ಬರಬೇಕಿದೆ ಹಾಗೂ ಸಂಸ್ಥೆಯಲ್ಲಿ ಕಾರ್ಯ ನಿರ್ವಸುತ್ತಿರುವ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಂಡು ಜನ ಪ್ರತಿನಿಧಿಗಳನ್ನು ಮುಖ್ಯವಾಹಿನಿಗೆ ತರಬೇಕಿದೆ, ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಅರಿತು ಕೆಲಸ ಮಾಡುವಂತಾಗಬೇಕೆಂದರು.
ಅವರು ಮುಂದುವರೆದು ನೀತಿ ನಿರೂಪಣೆಯಲ್ಲಿ ಅಧಿಕಾರಿಗಳು ಸಕ್ರಿಯವಾಗಿ ಪಾಳ್ಗೊಳ್ಳದೆ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತಿಲ್ಲ, ತರಬೇತಿಗಳು ಪ್ರಶ್ನೆಗಳನ್ನು ಹುಟ್ಟು ಹಾಕಿ ಉತ್ತರ ಕಂಡುಕೊಳ್ಳುವಂತಾಗಬೇಕೆಂದರು.
ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ವಿಕೇಂದ್ರಿತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ವೈ.ಘೋರ್ಪಡೆ ಮಾತನಾಡಿ, ಜಿಲ್ಲಾ ಪಂಚಾಯ್ತಿ,ತಾಲ್ಲೂಕು ಪಂಚಾಯಿತಿಗಳಲ್ಲಿ ಇರುವಂತೆ ಗ್ರಾಮಪಂಚಾಯಿತಿಗಳಲ್ಲಿ ಕೆ.ಡಿ.ಪಿ.ಸಭೆಗಳು ನಡೆಯುವಂತಾಗಬೇಕು ಹಾಗೂ ವಾರ್ಡ್ ಮತ್ತು ಗ್ರಾಮ ಸಭೆ ಸರಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕಿದೆ ಎಂದರು.
ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಕಾರ್ಯಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಮಾತನಾಡಿ ತಾಲ್ಲೂಕಿನಲ್ಲಿರುವ ಸಾಮಥ್ರ್ಯ ಸೌಧದ ಮೂಲಕ 3ಹಂತದ ಜನಪ್ರತಿನಿಧಿಗಳಿಗೆ ತರಬೇತಿ ನೀಡುವಂತಾಗಬೇಕು ಎಂದರು.
ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ಮಾತನಾಡಿ ಸಂವಿಧಾನದ 73ನೇ ತಿದ್ದುಪಡಿ ಪ್ರಕರಣ 243ಜಿ ನ ಪ್ರಕಾರ ಪಂಚಾಯತ್ ರಾಜ್ ಸಂಸ್ಥೆಗಳು ಸ್ವಯಂ ಸರ್ಕಾರವಾಗಿ ಕಾರ್ಯ ನಿರ್ವಹಿಸಬೇಕೆಂದು ಹೇಳುತ್ತಿದೆ, ಅದರಂತೆ ಸೂಕ್ತ ತರಬೇತಿಗಳ ಮೂಲಕ ಇದನ್ನ ಸಾಕಾರಗೊಳಿಸಬೇಕೆಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನೌಕರರ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ, ತಾಲ್ಲೂಕು ಪಂಚಾಯತ್ ಸದಸ್ಯರ ಒಕ್ಕೂಟದ ಅಧ್ಯಕ್ಷ ನೀಲಕಂಠಪ್ಪ, ಸಂಪನ್ಮೂಲ ವ್ಯಕ್ತಿಗಳ ಸಂಘದ ರಾಜ್ಯಾಧ್ಯಕ್ಷ ನ.ಲಿ.ಕೃಷ್ಣ, ಭಾಗವಹಿಸಿದ್ದರು.
ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳ ರಾಜ್ಯಮಟ್ಟದ ಸಮಾವೇಶವನ್ನು ಕರ್ನಾಟಕ ರಾಜ್ಯ ವಿಕೇಂದ್ರಿತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿ.ವೈ.ಘೋರ್ಪಡೆ ಉದ್ಘಾಟಿಸಿದರು. ಚಿತ್ರದಲ್ಲಿ ಮಾಜಿ ಸಂಸದರು ಹಾಗೂ ಕರ್ನಾಟಕ ಪಂಚಾಯತ್ ರಾಜ್ ಪರಿಷತ್‍ನ ರಾಜ್ಯಾಧ್ಯಕ್ಷರಾದ ನಾರಾಯಣಸ್ವಾಮಿ, ಗ್ರಾಮ ಪಂಚಾಯತ್ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಮಾರುತಿ ಮಾನ್ಪಡೆ, ತಾಲ್ಲೂಕು ಪಂಚಾಯತ್ ಸದಸ್ಯರ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ನೀಲಕಂಠಪ್ಪ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ಮುಂತಾದವರಿದ್ದಾರೆ.