ತುಮಕೂರು:
ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ ಮೀಸಲಿಟ್ಟಿರುವ ನಿವೇಶನವನ್ನು ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಶ್ರೀನಿವಾಸ್ ಅವರು ದಲಿತ ಪರ ಸಂಘಟನೆಗಳ ಮುಖಂಡರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆಂದು ಮೀಸಲಿಟ್ಟಿರುವ ಜಾಗದ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟರ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರು ಪ್ರಸ್ತಾಪಿಸಿ, ಭವನ ನಿರ್ಮಾಣಕ್ಕೆ ಮುಂದಾಗಬೇಕು, ಕಾಪೌಂಡ್ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ತಾಲ್ಲೂಕು ಸಮಾಜಕಲ್ಯಾಣಾಧಿಕಾರಿ ಶ್ರೀನಿವಾಸ್ ಅವರು ಸ್ಥಳ ಪರಿಶೀಲನೆ ನಡೆಸಿದರು.
ಭವನಕ್ಕೆಂದು ಮೀಸಲಿಟ್ಟಿರುವ ಜಾಗದಲ್ಲಿ ಸುರಿಯಲಾಗಿರುವ ಕಸವನ್ನು ತೆರವುಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ ಅವರು, ನಿವೇಶನವನ್ನು ಒತ್ತುವರಿ ಮಾಡದಂತೆ ಹಾಗೂ ನಿವೇಶನವನ್ನು ಸ್ವಚ್ಛವಾಗಿ ಇಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಈ ವೇಳೆ ಭರವಸೆ ನೀಡಿದರು.
ಈ ವೇಳೆ ದಲಿತ ಮುಖಂಡರಾದ ಎ.ನರಸಿಂಹಮೂರ್ತಿ, ಮರಳೂರು ಕೃಷ್ಣಮೂರ್ತಿ, ಸೋರೆಕುಂಟೆ ಯೋಗೀಶ್, ಬಂಡೆಕುಮಾರ್, ಶಿವಾಜಿ, ಜೆಸಿಬಿ ವೆಂಕಟೇಶ್, ನಾಗರಾಜು ಗೂಳಹರಿವೆ, ಹಬ್ಬತ್ತನಹಳ್ಳಿ ಶ್ರೀನಿವಾಸ್, ಊರ್ಡಿಗೆರೆ ಕೆಂಪರಾಜು, ಪಾಂಡುರAಗಯ್ಯ ಮುದಿಗೆರೆ ಇತರರು ಉಪಸ್ಥಿತರಿದ್ದರು.