ತುಮಕೂರು:

      ಗರ್ಭಿಣಿ ಸ್ತ್ರೀಯರು ಹಾಗೂ 0-2 ವರ್ಷದೊಳಗಿನ ಮಕ್ಕಳು ತಪ್ಪದೇ ಇಂದ್ರಧನುಷ್ ಲಸಿಕೆಯನ್ನು ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

      ನಗರದ ಮರಳೂರು ದಿಣ್ಣೆ ಅಂಗನವಾಡಿ ಕೇಂದ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಇಂದ್ರಧನುಷ್ ಲಸಿಕಾ ಅಭಿಯಾನದಲ್ಲಿ ಮಕ್ಕಳಿಗೆ ಸಾಂಕೇತಿಕವಾಗಿ ಲಸಿಕೆ ನೀಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

      ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಬಿ.ಆರ್. ಚಂದ್ರಿಕಾ ಮಾತನಾಡಿ, ಇಂದ್ರಧನುಷ್ ಲಸಿಕಾ ಅಭಿಯಾನದಲ್ಲಿ ಲಸಿಕೆ ವಂಚಿತರಾಗಿರುವ, ಬಿಟ್ಟು ಹೋಗಿರುವ, ಅಪಾಯಕಾರಿ ಪ್ರದೇಶದಲ್ಲಿರುವ ಫಲಾನುಭವಿಗಳನ್ನು ಗುರುತಿಸಿದ್ದು, ಲಸಿಕೆಗಳನ್ನು ನೀಡಲು ಕ್ರಮವಹಿಸಲಾಗಿದೆ. ಫಲಾನುಭವಿಗಳು ತಪ್ಪದೆ ಈ ಅಭಿಯಾನದಲ್ಲಿ ಲಸಿಕೆಯನ್ನು ಪಡೆದು ರೋಗಮುಕ್ತರಾಗಬೇಕು ಎಂದು ಮನವಿ ಮಾಡಿದರು.

      ಆರ್.ಸಿ.ಹೆಚ್ ಅಧಿಕಾರಿ ಡಾ|| ಕೇಶವರಾಜು ಮಾತನಾಡಿ, ಜಿಲ್ಲೆಯಲ್ಲಿ ಲಸಿಕೆಯಿಂದ ವಂಚಿತರಾದ 0-2ದೊಳಗಿನ 992 ಮಕ್ಕಳು, 218 ಗರ್ಭಿಣಿ ಮಹಿಳೆಯರನ್ನು ಗುರುತಿಸಿದ್ದು 336 ಇಂದ್ರಧನುಷ್ ಲಸಿಕಾ ಕೇಂದ್ರಗಳಲ್ಲಿ ಜಿಲ್ಲೆಯಾದಂತ್ಯ ಲಸಿಕೆಯನ್ನು ನೀಡಲಾಗುವುದು. ಸಾರ್ವಜನಿಕರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

      ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಟಿ.ಎ.ವೀರಭ್ರದಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಮೋಹನ್‍ದಾಸ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ|| ಮಹಿಮಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ||ಮೋಹನ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಹನುಮಂತರಾಯ,

(Visited 11 times, 1 visits today)