ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಬರೊಬ್ಬರಿ 5 ತಿಂಗಳ ಬಳಿಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ವರ್ಷ ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಸುಮಾರು 30 ಕಿಲೋಮೀಟರ್ ವ್ಯಾಪ್ತಿಯ ರಸ್ತೆಯಲ್ಲಿ ಗುಡ್ಡ ಕುಸಿದು ರಸ್ತೆಗೆ ಬಂಡೆಗಳು ಉರುಳಿಬಿದ್ದ ಪರಿಣಾಮ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.
ನಂತರದ ಎರಡು ತಿಂಗಳ ಬಳಿಕ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ರಾತ್ರಿ ವೇಳೆ ಆಂಬುಲೆನ್ಸ್ ಹೊರತುಪಡಿಸಿ ಯಾವುದೇ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿರಲಿಲ್ಲ.
ಇದರಿಂದಾಗಿ ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವವರಿಗೆ ಸಮಸ್ಯೆಯಾಗಿತ್ತು. ಈಗ ಜಿಲ್ಲಾಡಳಿತ ಪ್ರಯಾಣಿಕರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಕೆಎಸ್‌ಆರ್ಟಿಸಿ, ಮಿನಿ ಬಸ್ ಸಂಚಾರಕ್ಕೆ ಕೂಡ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.