ತುಮಕೂರು :

      ತುಮಕೂರು ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಆರ್.ಸುರೇಶ್ ಕುಮಾರ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.

      ಆನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಥಮ ದರ್ಜೆ ಕಾಲೇಜಿನಲ್ಲಿ 1600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಸುಸಜ್ಜಿತವಾದ ಕಾಲೇಜು ನಿರ್ಮಾಣವಾಗಬೇಕಾಗಿದೆ ಎಂದರು.

      ಕಾಲೇಜಿನ ವಾತಾವರಣವನ್ನು ಕಣ್ಣಾರೆ ಕಂಡಿದ್ದೇನೆ. ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಜಾಗದ ತೊಡಕಿದೆ. ಅದನ್ನು ನಿವಾರಿಸಿ ಉತ್ತಮ ಕಟ್ಟಡ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

      ಶಾಸಕರಾದ ಜ್ಯೋತಿಗಣೇಶ್, ಕಾಲೇಜಿನ ಅಧ್ಯಾಪಕರು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

(Visited 16 times, 1 visits today)