ತುಮಕೂರು :
2019ರಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ವಿಧಾನಸಭಾ ಉಪ ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಹಾಗೂ ಪಾಲಿಕೆ ಆಯುಕ್ತ ಟಿ. ಭೂಬಾಲನ್ ಅವರನ್ನು ಗೌರವಾನ್ವಿತ ರಾಜ್ಯಪಾಲರಾದ ವಜುಬಾಯ್ ರೂಢಬಾಯ್ ವಾಲಾ ಅವರು ಇಂದು ಸನ್ಮಾನಿಸಿದರು.
ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ರಾಜ್ಯಮಟ್ಟದ ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಓ ಹಾಗೂ ಪಾಲಿಕೆ ಆಯುಕ್ತರಿಗೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್, ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್, ಮತ್ತಿತರರು ಹಾಜರಿದ್ದರು.
(Visited 10 times, 1 visits today)