ತುಮಕೂರು:
ಫೆ. 12ರಿಂದ ಫೆ.26ರವರೆಗೆ ಸಿದ್ದಗಂಗಾ ಮಠದಲ್ಲಿ ಪ್ರತಿ ವರ್ಷದಂತೆ ಕೃಷಿ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಸಮಿತಿ ಕಾರ್ಯದರ್ಶಿ ಶಿವಕುಮಾರಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಪ್ರಾರಂಭಗೊಂಡ ನಂತರ ಬರಗಾಲದ ಕಾರಣ 1967ರಲ್ಲಿ ವಸ್ತು ಪ್ರದರ್ಶನವನ್ನು ಏರ್ಪಡಿಸಿರಲಿಲ್ಲ, ನಂತರ ಪ್ರತಿ ವರ್ಷವೂ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗುತ್ತಿದೆ ಎಂದರು.
ಮಠದಲ್ಲಿ ನಡೆಯುವ ವಸ್ತುಪ್ರದರ್ಶನ ರಾಜ್ಯದಲ್ಲಿ ಪ್ರತಿಷ್ಠಿತವಾಗಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಳಿಗೆಗಳು ಹಾಗೂ ವಿವಿಧ ಪ್ರಮುಖ ಸಂಸ್ಥೆಗಳ ಮಳಿಗೆಗಳು ವಸ್ತುಪ್ರದರ್ಶನದಲ್ಲಿದ್ದು, ಪ್ರತಿ ವರ್ಷದಂತೆ ಕೃಷಿ ಪ್ರದರ್ಶನ ರೈತರಿಗೆ ಅನುಕೂಲವಾಗಿದ್ದು, ಕಳೆದ ಆರು ತಿಂಗಳಿಂದಲೇ ತಯಾರಿ ಮಾಡಲಾಗಿದೆ ಎಂದರು.
ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಕೈಗಾರಿಕಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನ ನೀಡಲಾಗುತ್ತಿತ್ತು, ಆದರೆ ಕಳೆದ ವರ್ಷದ ಅನುದಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡಿಲ್ಲ, ಈ ಬಾರಿ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.
ಬಿ.ಗಂಗಾಧರಯ್ಯ ಅವರು ಮಾತನಾಡಿ ವಸ್ತು ಪ್ರದರ್ಶನಕ್ಕೆ ವರ್ಷದಿಂದ ವರ್ಷಕ್ಕೆ ಭೇಟಿ ನೀಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈಗ ನಡೆಸುತ್ತಿರುವ ಜಾಗ ಕಡಿಮೆಯಾಗುತ್ತಿದ್ದು, ಎಲ್ಲರ ಸಹಕಾರದಿಂದ ವಸ್ತು ಪ್ರದರ್ಶನ ಯಶಸ್ವಿಯಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ವಸ್ತು ಪ್ರದರ್ಶನವನ್ನು ಉತ್ತಮಗೊಳಿಸಲಾಗುತ್ತಿದೆ ಎಂದರು.
ರೇಣುಕ ಕೆಂಬಯ್ಯ ಅವರು ಮಾತನಾಡಿ ವಸ್ತು ಪ್ರದರ್ಶನದಲ್ಲಿ 14 ದಿನವೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಮೂರು ಪೌರಾಣಿಕ, ಸಾಮಾಜಿಕ, ಐತಿಹಾಸಿಕ, ರಸ ಮಂಜರಿ ಕಾರ್ಯಕ್ರಮಗಳೊಂದಿಗೆ ಶಾಲಾ ಮಕ್ಕಳ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.
ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ರಂಗಭೂಮಿ, ವೃತ್ತಿ, ಹವ್ಯಾಸ ಕಲಾವಿದರಿಗೆ ಪೆÇ್ರೀತ್ಸಾಹ ನೀಡಲಾಗುತ್ತಿದ್ದು, ಕಲಾವಿದರ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ಮಠದಲ್ಲಿ ಪ್ರತಿ ವರ್ಷ ಮಾಡಲಾಗುತ್ತಿದ್ದು, ಕಳೆದ ಎರಡು ವರ್ಷಗಳಿಂದ ಮಠದಲ್ಲಿಯೂ ಕೂಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಎರಡು ಜನರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.