ದೆಹಲಿ:
ಅನಾರೋಗ್ಯ ಕಾರಣದಿಂದ ಅಕಾಲಿಕ ಮರಣ ಹೊಂದಿದ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ನಿರ್ವಹಿಸುತ್ತಿದ್ದ ಒಂದು ಖಾತೆಯನ್ನು ಡಿ.ವಿ.ಸದಾನಂದ ಗೌಡರಿಗೆ ಹಂಚಿಕೆ ಮಾಡಲಾಗಿದೆ.
ಈಗಾಗಲೇ, ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನಿರ್ವಹಿಸುತ್ತಿದ್ದ ಸಂಸದ ಡಿ. ವಿ ಸದಾನಂದ ಗೌಡರಿಗೆ ಹೆಚ್ಚುವರಿಯಾಗಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯನ್ನು ನೀಡಲಾಗಿದೆ.
ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಸಂಸದೀಯ ವ್ಯವಹಾರಗಳ ಖಾತೆ ಹೆಚ್ಚುವರಿಯಾಗಿ ನೀಡಲಾಗಿದೆ.
ಕೇಂದ್ರ ಸಚಿವರಾಗಿದ್ದಾಗ ಅನಂತ್ ಕುಮಾರ್ ರಾಸಾಯನಿಕ, ರಸಗೊಬ್ಬರ ಖಾತೆ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು ನಿಭಾಯಿಸುತ್ತಿದ್ದರು.
ಕೇಂದ್ರ ಸಂಪುಟ ಸಂತಾಪ :
ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ತೀವ್ರ ಶೋಕ ವ್ಯಕ್ತಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ 2 ನಿಮಿಷ ಮೌನ ಆಚರಿಸಲಾಯಿತು.
(Visited 10 times, 1 visits today)